ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್ ಖಾಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ಮುಖ್ಯ ಆರೋಪಿ ತೃಣಮೂಲ ಕಾಂಗ್ರೆಸ್ ಮುಖಂಡ ಶಹಜಹಾನ್ ಶೇಖ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಶಹಜಹಾನ್ ಶೇಖ್ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಖಚಿತಪಡಿಸಿದ್ದಾರೆ. 2019ರ ಲೋಕಸಭಾ ಚುನಾವಣೆ ನಂತರ ಸಂದೇಶ್ ಖಾಲಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರಾದ ಪ್ರದೀಪ್ ಮೊಂಡಲ್, ದೇವದಾಸ್ ಮೊಂಡಲ್ ಮತ್ತು ಸುಕಾಂತ್ ಮೊಂಡಲ್ ಅವರನ್ನು ಹತ್ಯೆ ಮಾಡಲಾಗಿತ್ತು. ನಂತರ ನಡೆದ ಪ್ರತಿಭಟನೆಗಳು ಹಾಗೂ ಹಿಂಸಾಚಾರದಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ.