HomeLatest Newsಸಂಧ್ಯಾ ಥಿಯೇಟರ್ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು, ಯುವತಿಯರ ಖಾಸಗಿ ವಿಡಿಯೋ ರೆಕಾರ್ಡ್: ಇಬ್ಬರು ಆರೋಪಿಗಳು ವಶಕ್ಕೆ

ಸಂಧ್ಯಾ ಥಿಯೇಟರ್ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು, ಯುವತಿಯರ ಖಾಸಗಿ ವಿಡಿಯೋ ರೆಕಾರ್ಡ್: ಇಬ್ಬರು ಆರೋಪಿಗಳು ವಶಕ್ಕೆ

ಬೆಂಗಳೂರು: ಬೆಂಗಳೂರಿನ ಸಂಧ್ಯಾ ಥಿಯೇಟರ್ ನ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು, ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಟೆಕ್ಕಿ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿದೆ.

ಥಿಯೇಟರ್ ನ ಸೌಚಾಲಯದಲ್ಲಿ ಕ್ಯಾಮರಾ ಇಟ್ಟು ಯುವತಿಯ ಖಾಸಗಿ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಮಹಿಳಾ ಟೆಕ್ಕಿ ದೂರಿನ ಹಿನ್ನೆಲೆಯಲ್ಲಿ ಮಡಿವಾಳ ಠಾಣೆ ಪೊಲೀಸರು ಥಿಯೇಟರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟೆಕ್ಕಿ ದೂರಿನ ಮೇರೆಗೆ ಠಿಯೇಟರ್ ಸಿಬ್ಬಂದಿ ರಾಜೇಶ್, ಕಮಲ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಮಹಿಳಾ ಟೆಕ್ಕಿ ತನ್ನ ಸ್ನೇಹಿತೆಯರ ಜೊತೆ ಭಾನುವಾರ ಸಂಧ್ಯಾ ಥಿಯೇಟರ್ ಗೆ ಸಿನಿಮಾಗೆ ಹೋಗಿದ್ದರು. ಈ ವೇಳೆ ಮಹಿಳಾ ಟೆಕ್ಕಿ ಹಾಗೂ ಆಕೆಯ ಸ್ನೇಹಿತೆಯರು ಶೌಚಾಲಯಕ್ಕೆ ಹೋಗಿದ್ದರು. ಈ ವೇಳೆ ರಾಜೇಶ್ ಎಂಬಾತ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳಾ ಟೆಕ್ಕಿ ಆರೋಪಿಯನ್ನು ಹಿಡಿದು ಮಾಲೀಕನ ಬಳಿ ಕರೆದೊಯ್ದಿದ್ದಾರೆ. ಈ ವೇಳೆ ಆತ ಕಮಲ್ ಎಂಬಾತ ವಿಡಿಯೋ ಮಾಡಲು ಹೇಳಿದ್ದ ಎಂದಿದ್ದಾನೆ. ಸದ್ಯ ರಾಜೇಶ್, ಕಮಲ್ ಹಾಗೂ ಸಂಧ್ಯಾ ಥಿಯೇಟ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular