ಸಾಣೆಹಳ್ಳಿ ಶ್ರೀಗಳಿಗೆ ಕಾಯಕಯೋಗಿ ‘ಶ್ರೀ ಸಿದ್ದರಾಮೇಶ್ವರ’ ಪ್ರಶಸ್ತಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ ಕಾಯಕ ಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಸಾಣೆಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 5 ಲಕ್ಷ ರೂ. ನಗದು, ಸ್ಮರಣಿಕೆ ಮತ್ತು ಫಲಕ ಒಳಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನವರಿ 14ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಿದ್ದರಾಮೇಶ್ವರ ಜಯಂತಿ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ವೈಚಾರಿಕತೆ, ಜನಪರ ಕಾಳಜಿ, ರಂಗಾಸಕ್ತಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಒಲವು, ಜೀವನಾದರ್ಶ ಪರಿಗಣಿಸಿ ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರನ್ನು ಈ ಸಾಲಿನ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಮಲ್ಲಿಕಾ ಘಂಟಿಯವರ ಅಧ್ಯಕ್ಷತೆಯ ಸಮಿತಿ ಆಯ್ಕೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read