HomeKarnatakaBIG NEWS: ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಶ್ರೀ

BIG NEWS: ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಶ್ರೀ

ಚಿತ್ರದುರ್ಗ: ಮನೆಗಳಲ್ಲಿ, ವೇದಿಕೆ ಕಾರ್ಯಕ್ರಮಗಳಲ್ಲಿ ವಿಘ್ನನಿವಾರಕನನ್ನಾಗಿ ಗಣಪತಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ, ಅದರ ಬದಲಿಗೆ ವಾಸ್ತವಕ್ಕೆ ತಕ್ಕನಾದ ವಚನಗಳನ್ನು ಪಠಿಸಬೇಕು ಎಂದು ಸಾಣೆಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿಯಲ್ಲಿ ಗುರುವಾರದಿಂದ ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಣಪತಿ ಸ್ತುತಿಸುವುದು ಮೌಢ್ಯದ ಆಚರಣೆ, ವಚನ ಪ್ರಸ್ತುತ ಪಡಿಸುವುದು ನಿಜವಾದ ಪ್ರಾರ್ಥನೆ. ಶಿವಕುಮಾರ ಸ್ವಾಮೀಜಿ ಕಾರ್ಯಕ್ರಮಗಳ ಆರಂಭದಲ್ಲಿ ವಚನಗಳನ್ನು ಹಾಡಬಹುದು ಎಂದು ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ಗಣಪತಿ ಕಾಲ್ಪನಿಕ ದೇವರು, ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ನೆಪ ಮಾತ್ರಕ್ಕೆ ಹುಟ್ಟಿಕೊಂಡ ದೇವರದು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ, ಮನೆಗಳಲ್ಲಿ ಅಥವಾ ಯಾವುದೇ ಸಮಾರಂಭಗಳಲ್ಲಿ ಮೊದಲು ಗಣಪತಿ ಪೂಜೆ, ಸ್ತೋತ್ರ ಶ್ಲೋಕ ಪಠಸಬೇಕು ಎಂಬುದು ಹಲವರ ನಂಬಿಕೆಯಾಗಿದ್ದು, ಅದರ ಬದಲು ವಚನಗಳನ್ನು ಪ್ರಾರ್ಥನೆಯಂತೆ ಪಠಿಸಬೇಕು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular