HomeKarnatakaBIG NEWS: ಬಿಜೆಪಿಗೆ ಮತ್ತೊಂದು ಶಾಕ್; ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ

BIG NEWS: ಬಿಜೆಪಿಗೆ ಮತ್ತೊಂದು ಶಾಕ್; ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ ಪಕ್ಷಾಂತರ ಪರ್ವ ಜೋರಾಗಿದೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಸಂಗಣ್ಣ ಕರಡಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಆಗಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಇದರಿಂದ ಬಿಜೆಪಿ ವಿರುದ್ದ ಸಿಡಿದೆದ್ದಿರುವ ಸಂಗಣ್ಣ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಮಾಜಿ ಶಾಸಕ ಹೆಚ್.ಸಿ.ಮಾಳಗಿ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular