HomeKarnatakaBREAKING NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಮಾಜಿ ಶಾಸಕ ಸಂಜಯ್...

BREAKING NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.

ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಸಂಜಯ್ ಪಾಟೀಲ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ರಾತ್ರಿ ಮಾತ್ರೆ ಜೊತೆ ಎಕ್ಸ್ ಟ್ರಾ ಪೆಗ್ ಹಾಕಬೇಕು’ ಎಂದು ನಾಲಿಗೆ ಹರಿಬಿಟ್ಟಿದ್ದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದು, ಸಂಜಯ್ ಪಾಟೀಲ್ ಗೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular