HomeEntertainment'ಸಂಜು' ಚಿತ್ರದ ಟ್ರೈಲರ್ ರಿಲೀಸ್

‘ಸಂಜು’ ಚಿತ್ರದ ಟ್ರೈಲರ್ ರಿಲೀಸ್

ಮನ್ವಿತ್ ಹಾಗೂ ರೇಖಾದಾಸ್ ಪುತ್ರಿ ಶ್ರಾವ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು’ ಚಿತ್ರದ ಟ್ರೈಲರ್, ನಿನ್ನೆಯಷ್ಟೇ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದೆ.

ರೋಮ್ಯಾಂಟಿಕ್ ಲವ್ ಸ್ಟೋರಿ  ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯತಿರಾಜ್ ನಿರ್ದೇಶಿಸಿದ್ದು, ದಿಶಾ  ಎಂಟರ್ಪ್ರೈಸಸ್ ಬ್ಯಾನರ್ ನಲ್ಲಿ ಸಂತೋಷ್ ಡಿಂಕ ಮಹದೇವಪ್ಪ ನಿರ್ಮಾಣ ಮಾಡಿದ್ದಾರೆ. ಮನ್ವಿತ್ ಮತ್ತು ಶ್ರಾವ್ಯ ಸೇರಿದಂತೆ ತುಕಾಲಿ ಸಂತು, ಪ್ರಕಾಶ್, ನಾಗರತ್ನ, ಮಹಾಂತೇಶ್, ಮಂಜು ಕವಿ, ಚೇತನ್ ರಾಜ್, ಸಂಗೀತಾ, ಬಣ್ಣ ಹಚ್ಚಿದ್ದಾರೆ. ವಿಜಯ್ ಹರಿತ್ಸ ಸಂಗೀತ ಸಂಯೋಜನೆ ನೀಡಿದ್ದು, ವಿದ್ಯಾ ನಾಗೇಶ್ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ, ಮದನ್ ಮತ್ತು ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular