HomeLive Newsಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ಮೈಸೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು...

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ಮೈಸೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

ಬೆಂಗಳೂರು: ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಊರಿಗೆ ಹೋಗುವವರಿಗೆ ನೈಋತ್ಯ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಈ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಮೂರು ಟ್ರಿಪ್‌ಗಳ ಸಂಚಾರ ನಡೆಸಲಿವೆ. ಜನವರಿ 13ರಿಂದ ರೈಲು ಸಂಚಾರ ಆರಂಭವಾಗಲಿದೆ. ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಮಯ ಹಾಗೂ ನಿಲುಗಡೆ ಮಾಹಿತಿ ಇಲ್ಲಿದೆ.

ಮೈಸೂರು–ಬೆಳಗಾವಿ ವಿಶೇಷ ರೈಲು (ಸಂಖ್ಯೆ 06285): ಜನವರಿ 13, 16 ಮತ್ತು 23ರಂದು ರಾತ್ರಿ 8:40ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ–ಮೈಸೂರು ವಿಶೇಷ ರೈಲು (ಸಂಖ್ಯೆ 06286): ಜನವರಿ 15, 18 ಮತ್ತು 26ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 6:15ಕ್ಕೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎಸಿ 2-ಟೈರ್ ಕಮ್ ಎಸಿ 3-ಟೈರ್  (1), ಎಸಿ 3-ಟೈರ್ (3), ಸ್ಲೀಪರ್ ಕ್ಲಾಸ್ (13), ಸಾಮಾನ್ಯ ದ್ವಿತೀಯ ದರ್ಜೆ (4) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಇರಲಿವೆ. ಪ್ರಯಾಣಿಕರು ಈ ರೈಲಿನ ಅನುಕೂಲತೆ ಪಡೆಯಬೇಕೆಂದು ರೈಲ್ವೆ ಇಲಾಖೆ ಮನವಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular