ಬೆಂಗಳೂರು: ಸ್ಯಾಂಡಲ್ ವುಡ್ ನ ಯುವ ನಟ ಸಂತೋಷ್ ಬಾಲರಾಜ್ ಜಾಂಡಿಸ್ ನಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕರಿಯ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ನಟ ಸಂತೋಷ್ ಬಾಲರಾಜ್ ಅವರು ಜಾಂಡಿಸ್ ನಿಂದ ಬಳಲುತ್ತಿದ್ದು, ಎರಡು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಮಾರಸ್ವಾಮಿ ಲೇಔಟ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಂತೋಷ್ ಬಾಲರಾಜ್ ತಂದೆ ಆನೇಕಲ್ ಬಾಲರಾಜ್ ದರ್ಶನ್ ಅಭಿನಯದ ಕರಿಯ ಚಿತ್ರದ ನಿರ್ಮಾಣ ಮಾಡಿದ್ದರು. ಸಂತೋಷ್ ಬಾಲರಾಜ್ ಕರಿಯ-2, ಕೆಂಪ, ಗಣಪ, ಬರ್ಕ್ಲಿ, ಸತ್ಯಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಅಯಕ ನಟನಾಗಿ ಅಭಿನಯಿಸಿದ್ದಾರೆ.