HomeKarnatakaBREAKING: ಭಾಷಣ ಮಾಡುವಾಗ ವೇದಿಕೆಯಲ್ಲಿಯೇ ಕುಸಿದು ಬಿದ್ದ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ; ಆಸ್ಪತ್ರೆಗೆ ದಾಖಲು

BREAKING: ಭಾಷಣ ಮಾಡುವಾಗ ವೇದಿಕೆಯಲ್ಲಿಯೇ ಕುಸಿದು ಬಿದ್ದ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಮಾರಂಭವೊಂದರಲ್ಲಿ ಭಾಷಣ ಮಾಡುವಾಗಲೇ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಕುಸಿದು ಬಿದ್ದು, ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸ್ಕೌಟ್ಸ್ ಆಂಡ್ ಗೈಡ್ಸ್ ಆಯುಕ್ತ ಪಿಜಿಆರ್ ಸಿಂಧ್ಯಾ ಅವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ವೇದಿಕೆಯಲ್ಲಿ ಭಾಷಣ ಮುಗಿಸಿ ಕುಳಿತುಕೊಳ್ಳುವಾಗ ಏಕಾಏಕಿ ವಾಂತಿ ಮಾಡಿಕೊಂಡಿದ್ದ ಸಂತೋಷ್ ಹೆಗ್ಡೆ, ಕೆಲವೇ ಕ್ಷಣಗಳಲ್ಲಿ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ವೇದಿಕೆ ಮೇಲಿದ್ದ ಸ್ಪೀಕರ್ ಯು.ಟಿ.ಖಾದರ್ ತಕ್ಷಣ ಅವರನ್ನು ಮೇಲಕೆತ್ತಲು ಯತ್ನಿಸಿದ್ದಾರೆ. ಬಳಿಕ ಸಂತೋಷ್ ಹೆಗ್ಡೆ ಅವರನ್ನು ತಮ್ಮದೇ ಕಾರಿನಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರಿಗೆ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ಪೀಕರ್ ಖಾದರ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular