ರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ಹಗಲಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ: ರೈತರ ಪಂಪ್ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ವಿದ್ಯುತ್ ಪೂರೈಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಕಲಘಟಗಿ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ನಿಯಮದಂತೆ ರೈತರ ಪಂಪ್ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಆಯಾ ಭಾಗದ ಕಡೆ ಒಂದು ವಾರ ರಾತ್ರಿ ಇನ್ನೊಂದು ವಾರ ಹಗಲು ಹೊತ್ತಿನಲ್ಲಿ ಸಮಯ ನಿಗದಿಗೊಳಿಸಿ ವಿದ್ಯುತ್ ಪೂರೈಕೆ ಮಾಡಬೇಕು. ಅದನ್ನು ಬಿಟ್ಟು ಮನಸ್ಸಿಗೆ ಬಂದಂತೆ ವಿದ್ಯುತ್ ಪೂರೈಕೆ ಮಾಡಬಾರದು ಎಂದು ತಿಳಿಸಿದ್ದಾರೆ.

ಅರಣ್ಯ ಪ್ರದೇಶದ ಕೃಷಿ ಜಮೀನುಗಳಿಗೆ ರಾತ್ರಿ ಮೂರು ಗಂಟೆಗೆ ವಿದ್ಯುತ್ ನೀಡಿದರೆ ಕಾಡುಪ್ರಾಣಿಗಳ ಹಾವಳಿಯಿಂದ ರೈತರಿಗೆ ಜಮೀನುಗಳಿಗೆ ಹೋಗಲು ತೊಂದರೆಯಾಗುತ್ತದೆ. ಅವರಿಗೆ ಹಗಲು ಹೊತ್ತಿನಲ್ಲಿ ಹೆಚ್ಚಿನ ಸಮಯ ವಿದ್ಯುತ್ ನೀಡಲು ಕ್ರಮ ಕೈಗೊಳ್ಳಬೇಕು. ಕೃಷಿ ವರ್ಗಕ್ಕೆ ಹೆಚ್ಚಿನ ವಿದ್ಯುತ್ ಪೂರೈಸಲು ಮಂಜೂರಾದ ಕಾಮಗಾರಿಯ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read