HomeKarnatakaಹಾಡು ಹಾಡಿ, ತಾಳ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಸಚಿವ ಸಂತೋಷ್ ಲಾಡ್

ಹಾಡು ಹಾಡಿ, ತಾಳ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಸಚಿವ ಸಂತೋಷ್ ಲಾಡ್

ಕಲಘಟಗಿ ಪಟ್ಟಣ ಪಂಚಾಯತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕ್ಷೇತ್ರ ಪ್ರಚಾರದ ಎಲ್‍ಇಡಿ ವಾಹನಕ್ಕೆ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚ ಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಸಾಮಾನ್ಯ ಜನರ ಬದುಕಿನಲ್ಲಿ ನೇರ ಬದಲಾವಣೆ ತರುವ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲೂ ವ್ಯಾಪಕ ಪರಿಣಾಮ ಬೀರಿವೆ” ಎಂದು ಸಚಿವರು ಹೇಳಿದರು.

ಹಾಡು ಹಾಡಿ, ತಾಳ ಹಾಕುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದ ಸಚಿವರು, “ಕ್ಷೇತ್ರ ಪ್ರಚಾರ ವಾಹನವು ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 20 ಹಳ್ಳಿಗಳಲ್ಲಿ ಸಂಚರಿಸಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಲಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಯೂ ಯೋಜನೆಗಳ ಲಾಭಗಳ ಕುರಿತು ವಿವರಿಸಲಾಗುತ್ತದೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ತಲುಪಬೇಕು. ಕ್ಷೇತ್ರ ಪ್ರಚಾರ ವಾಹನದ ಮೂಲಕ ಮನೆಮನೆಗೆ ತೆರಳಿ ಎಲ್ಲ ಜನರಿಗೂ ಮನಮುಟ್ಟುವಂತೆ ಪ್ರಚಾರವನ್ನು ಮಾಡಬೇಕು” ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ: ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ 727.78 ಕೋಟಿ ಬಿಡುಗಡೆಯಾಗಿದೆ. ಗೃಹಲಕ್ಷ್ಮಿ ಯೋಜನೆಗೆ 3,81,493 ಜನ ಫಲಾನುಭವಿಗಳಿದ್ದು, ರೂ. 1,740 ಕೋಟಿ ಹಣ ಜಮೆಯಾಗಿರುತ್ತದೆ.

ಗೃಹಜ್ಯೋತಿ ಯೋಜನೆಗೆ ರೂ. 639 ಕೋಟಿ ಅನುದಾನ ನೀಡಲಾಗಿದ್ದು, 5,16,948 ಫಲಾನುಭವಿಗಳು ಲಾಭ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಗೆ ರೂ.358.29 ಕೋಟಿ ವೆಚ್ಚವಾಗಿದ್ದು, 3,62,516 ಫಲಾನುಭವಿಗಳು ಪ್ರಯೋಜನ ಪಡೆದಿದ್ದಾರೆ.

ಯುವನಿಧಿ ಯೋಜನೆ ಅಡಿಯಲ್ಲಿ 7,920 ಫಲಾನುಭವಿಗಳಿಗೆ ರೂ.19.95 ಕೋಟಿ ಹಣ ಡಿಬಿಟಿ ಮೂಲಕ ಹಣ ಜಮೆಯಾಗಿದೆ. ಒಟ್ಟು ರೂ. 3485.02 ಕೋಟಿ ಮೊತ್ತವನ್ನು ಗ್ಯಾರಂಟಿ ಯೋಜನೆಗಳಡಿ ಜಿಲ್ಲೆಯಲ್ಲಿ ವೆಚ್ಚ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕಾಗಿ ರೂಪುಗೊಂಡ ಕಲಾತಂಡಗಳೊಂದಿಗೆ ಸಚಿವರು ಸ್ವತಃ ಸಂಗೀತ ಹಾಡಿ, ತಾಳ ಬಾರಿಸಿ ಕಲಾವಿದರನ್ನು ಪ್ರೋತ್ಸಾಹಿಸಿದರು.

ಸಚಿವರ ಸರಳತೆ ಹಾಗೂ ಸ್ನೇಹಪೂರ್ಣ ನಡೆ ಜನಮನ ಗೆದ್ದಿತು. ಕಲೆಯ ಮೂಲಕ ಯೋಜನೆಗಳ ಸಂದೇಶವನ್ನು ಜನರಿಗೆ ತಲುಪಿಸುವ ಪ್ರಯತ್ನ ಗಮನಸೆಳೆಯಿತು. ಈ ಸಂದರ್ಭ ಸಚಿವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ, ಕಲಾವಿದರ ಪ್ರತಿಭೆಯನ್ನು ಮೆಚ್ಚಿದರು. ಈ ಮೂಲಕ ಸಾರ್ವಜನಿಕರಲ್ಲಿ ಉತ್ಸಾಹ ಮೂಡಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಹಾಗೂ ಭಾಗವಹಿಸುವ ಮನೋಭಾವವನ್ನು ಹೆಚ್ಚಿಸಿದರು.

ಕ್ಷೇತ್ರ ಪ್ರಚಾರ ವಾಹನದೊಂದಿಗೆ ಕುಂದಗೋಳ ತಾಲೂಕಿನ ಹರ್ಲಾಪೂರ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಜಾನಪದ ಕಲಾತಂಡದ ನಾಯಕರಾದ ದಾವಲಸಾಬ ದೊಡ್ಡಮನಿ ಅವರ ನೇತೃತ್ವದಲ್ಲಿ ಪ್ರಕಾಶ ಮಡಿವಾಳರ, ರಮೇಶ ಸಜ್ಜಗಾರ, ಗೂಳಪ್ಪ ದುರ್ಗಣ್ಣವರ, ನೌಶಾದ ಬೆಂತೂರ ಅವರು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಜನಪದ ಹಾಡುಗಳು ಹಾಗೂ ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಕಾರ್ಯಕ್ರಮವನ್ನು ನೀಡಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular