HomeKarnatakaನಕಲಿ ಕಾರ್ಡ್ ಹಾವಳಿ ತಡೆಗೆ ಮಹತ್ವದ ಕ್ರಮ: ಜಿಲ್ಲಾವಾರು ಕೇಂದ್ರ ಆರಂಭಿಸಿ ಪರಿಶೀಲನೆ; ಆರು ತಿಂಗಳಲ್ಲಿ...

ನಕಲಿ ಕಾರ್ಡ್ ಹಾವಳಿ ತಡೆಗೆ ಮಹತ್ವದ ಕ್ರಮ: ಜಿಲ್ಲಾವಾರು ಕೇಂದ್ರ ಆರಂಭಿಸಿ ಪರಿಶೀಲನೆ; ಆರು ತಿಂಗಳಲ್ಲಿ ಅರ್ಹ ಕಾರ್ಮಿಕರ ಆಯ್ಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರ ನಕಲಿ ಕಾರ್ಡ್ ಗಳ ಹಾವಳಿಗೆ ಕಡಿವಾಣ ಹಾಕಲು ಜಿಲ್ಲಾವಾರು ಕೇಂದ್ರಗಳನ್ನು ಆರಂಭಿಸಿ ಪರಿಶೀಲನೆ ನಡೆಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಸಿದ್ದು ಸವದಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. 2016ರಲ್ಲಿ 12 ಲಕ್ಷ ಕಾರ್ಮಿಕರ ನೋಂದಣಿಯಾಗಿದ್ದು, ಈಗ 50 ಲಕ್ಷಕ್ಕೂ ಅಧಿಕ ಕಾರ್ಡ್ ಗಳು ನೋಂದಣಿಯಾಗಿದೆ. ಹೀಗಾಗಿ ನಕಲಿ ಕಾರ್ಡ್ ಗಳ ಹಾವಳಿಗೆ ಇಲಾಖೆ ಕಡಿವಾಣ ಹಾಕಲು ಮುಂದಾಗಿದ್ದು, ಜಿಲ್ಲಾವಾರು ಕೇಂದ್ರಗಳನ್ನು ಆರಂಭಿಸಿ ಪರಿಶೀಲನೆ ನಡೆಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular