HomeKarnatakaಬಡ, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ: ‘ಸಪ್ತಪದಿ ಯೋಜನೆ’ ಮರು ಜಾರಿ

ಬಡ, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ: ‘ಸಪ್ತಪದಿ ಯೋಜನೆ’ ಮರು ಜಾರಿ

ಮಂಗಳೂರು: ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಮದುವೆಯ ಆರ್ಥಿಕ ಸಂಕಷ್ಟ ತಪ್ಪಿಸಲು ಜಾರಿಗೊಳಿಸಲಾಗಿದ್ದ ಸಪ್ತಪದಿ ಯೋಜನೆಯನ್ನು ಮುಂದುವರೆಸುವ ಕುರಿತಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ.

ಬೆಳ್ತಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ ಸಪ್ತಪದಿ ಯೋಜನೆ ಮುಂದುವರೆಸುವ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2021 ರಲ್ಲಿ ಮುಜರಾಯಿ ಇಲಾಖೆ ಬಡ ಮತ್ತು ಮಧ್ಯಮ ವರ್ಗದವರಿಗೆ ಮದುವೆಯ ಆರ್ಥಿಕ ಹೊರೆ ಕಡಿಮೆ ಮಾಡಲು ಸಪ್ತಪದಿ ಸಾಮೂಹಿಕ ವಿವಾಹ ಯೋಜನೆ ಜಾರಿಗೊಳಿಸಿತ್ತು. ಅದನ್ನು ಮರು ಜಾರಿ ಮಾಡುವ ಬಗ್ಗೆ ಸಚಿವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular