HomeLatest NewsBREAKING: ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ: ಬೆಚ್ಚಿಬಿದ್ದ ಅಧಿಕಾರಿಗಳು, ಸಿಬ್ಬಂದಿಗಳು

BREAKING: ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ: ಬೆಚ್ಚಿಬಿದ್ದ ಅಧಿಕಾರಿಗಳು, ಸಿಬ್ಬಂದಿಗಳು

ಮೈಸೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ RDX ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆಯಿಂದ ತಾಲೂಕು ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು ಕಂಗಾಲಾಗಿದ್ದಾರೆ.

ಸರಗೂರು ತಾಲೂಕು ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ತಾಲೂಕು ಕಚೇರಿಯಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ದುಷ್ಕರ್ಮಿಗಳು ಬೆದರಿಕೆಯೊಡ್ಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ತಾಲೂಕು ಕಚೇರಿಗೆ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ರಿಯ ದಳ, ಶ್ವಾನ ದಳ ಆಗಮಿಸಿದ್ದು, ಕಚೇರಿಯಲ್ಲಿ ತಪಾಸಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular