HomeKarnatakaಕೇಂದ್ರೀಯ ವಿವಿಯಲ್ಲಿ ಸರಸ್ವತಿ ಪೂಜೆಗೆ ಆಕ್ಷೇಪ: ವಿದ್ಯಾರ್ಥಿಗಳ ವಾಗ್ವಾದ

ಕೇಂದ್ರೀಯ ವಿವಿಯಲ್ಲಿ ಸರಸ್ವತಿ ಪೂಜೆಗೆ ಆಕ್ಷೇಪ: ವಿದ್ಯಾರ್ಥಿಗಳ ವಾಗ್ವಾದ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗುಂಚಿ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಗುಂಪು ಸರಸ್ವತಿ ಪೂಜೆಗೆ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಗ್ರಂಥಾಲಯ ಮತ್ತು ಬಿಎಡ್ ವಿಭಾಗದಲ್ಲಿ ವಸಂತ ಪಂಚಮಿ ಅಂಗವಾಗಿ ಸರಸ್ವತಿ, ಗಣೇಶ ಪೂಜೆ, ಹೋಮ ನಡೆಸಲಾಗುತ್ತಿತ್ತು. ವಿಭಾಗಕ್ಕೆ ಆಗಮಿಸಿದ ಕೆಲವು ವಿದ್ಯಾರ್ಥಿಗಳು ಪೂಜೆ, ಹೋಮ ಮಾಡುವುದು ಅಧಿಕೃತವೇ? ಇನ್ನೊಮ್ಮೆ ಈ ರೀತಿ ಪೂಜೆ ಮಾಡಿದರೆ ಕೇಸ್ ಹಾಕಿಸುತ್ತೇವೆ ಎಂದು ಹೇಳಿದ್ದು, ಉಪನ್ಯಾಸಕರೊಂದಿಗೆ ವಾಗ್ವಾದ ನಡೆಸಿದ್ದಾರೆ.

ಸ್ಥಳದಲ್ಲಿದ್ದ ಎಬಿವಿಪಿ ವಿದ್ಯಾರ್ಥಿಗಳು ಇದನ್ನು ತಡೆಯಲು ಯತ್ನಿಸಿದ್ದು, ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ನರೋಣಾ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಎರಡು ಗುಂಪುಗಳ ವಿದ್ಯಾರ್ಥಿಗಳನ್ನು ಸಮಾಧಾನ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular