‘ಅಮೃತ ವರ್ಷಿಣಿ’ ಖ್ಯಾತಿಯ ನಟ ಶರತ್ ಬಾಬು ಸಾವಿನ ವರದಿ ತಳ್ಳಿಹಾಕಿದ ಸಹೋದರಿ

ಖ್ಯಾತ ನಟ ಶರತ್ ಬಾಬು ಸತ್ತಿಲ್ಲ..! ಅವರು ಜೀವಂತವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.

ನಟ ಶರತ್ ಬಾಬು ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿರುವಾಗಲೇ ಅವರ ಪಿಆರ್ಒ ಅವರು ಮಾಹಿತಿ ಹಂಚಿಕೊಂಡಿದ್ದು, ಶರತ್ ಬಾಬು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಯಾವುದೇ ಸುದ್ದಿಯನ್ನು ನಂಬಬೇಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಶರತ್ ಬಾಬು ಅವರ ಆರೋಗ್ಯದ ಬಗ್ಗೆ ಅವರ ಸಹೋದರಿ ಹೇಳಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶರತ್ ಬಾಬು ಬಗ್ಗೆ ಎಲ್ಲಾ ಸುದ್ದಿಗಳು ತಪ್ಪಾಗುತ್ತಿವೆ, ಶರತ್ ಬಾಬು ಸ್ವಲ್ಪ ಚೇತರಿಸಿಕೊಂಡಿದ್ದಾರೆ ಮತ್ತು ಅವರ ಚಿಕಿತ್ಸಾ ಕೊಠಡಿಯನ್ನು ಬದಲಾಯಿಸಲಾಗಿದೆ, ಶರತ್ ಬಾಬು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಭಾವಿಸುತ್ತೇನೆ. ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಸುದ್ದಿಗಳನ್ನು ನಂಬಬೇಡಿ ಎಂದು ಹೇಳಿದ್ದಾರೆ.

ಕಳೆದ ವಾರದ ಆರಂಭದಲ್ಲಿ ಶರತ್ ಬಾಬು ಅವರನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. 71 ವರ್ಷದ ಅವರು ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದರು. ಬಹು ಅಂಗಾಂಗ ಹಾನಿಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವರ್ಷದ ಮಾರ್ಚ್‌ನಲ್ಲಿ ಚೆನ್ನೈನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಅವರು ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರು ಎಂಬುದು ಗಮನಿಸಬೇಕಾದ ಸಂಗತಿ.

https://twitter.com/Mirchi9/status/1653784067270115330

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read