ಇಂದು ಶಾಲೆಗಳಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ `ರಾಷ್ಟ್ರೀಯ ಏಕತಾ ದಿನ’ವಾಗಿ ಆಚರಣೆ : ಶಿಕ್ಷಣ ಇಲಾಖೆಯಿಂದ ಸುತ್ತೋಲೆ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಅಕ್ಟೋಬರ್ 31 ರ ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವಾಗಿ ಆಚರಣೆ ಮಾಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷವೂ 31ನೇ ಅಕ್ಟೋಬರ್‌ಂದು ಸರ್ದಾರ್ ವಲ್ಲಭಬಾಯಿ ಪಟೇಲ್‌ ರವರ ಜನ್ಮದಿನವನ್ನು “ರಾಷ್ಟ್ರೀಯ ಏಕತಾ” ದಿನವನ್ನಾಗಿ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ದಿನಾಂಕ:31.10.2023 ರಂದು ಶಿಕ್ಷಕರು ಶಾಲಾ ಹಂತದಲ್ಲಿ ಪ್ರಾರ್ಥನಾ ವೇಳೆಯಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್‌ರವರು ದೇಶದ ಏಕೀಕರಣಕ್ಕಾಗಿ, ದೇಶವನ್ನು ಬಲಪಡಿಸಲು, ಭದ್ರತೆಯನ್ನು ಕಾಪಾಡಿಕೊಳ್ಳಲು ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದನ್ನು ಸ್ಮರಿಸುತ್ತಾ, ವಿದ್ಯಾರ್ಥಿಗಳೊಂದಿಗೆ ಕೆಳಕಂಡ ಪ್ರತಿಜ್ಞೆಯನ್ನು ತೆಗೆದುಕೊಳ್ಳುವುದು ಹಾಗೂ ಪಟೇಲ್‌ರವರ ದೂರದೃಷ್ಟಿ, ದೇಶದ ಏಕತೆಯ ಭಾವನೆಗಳು ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಬರವಣಿಗೆ, ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಂಡು, ಜಾಥಾ ಮೂಲಕ ಅವರ ಸಂದೇಶವನ್ನು ದೇಶವಾಸಿಗಳಲ್ಲಿ ಹರಡುವುದರ ಮೂಲಕ ಶಾಲಾ ಮಕ್ಕಳು ಪಟೇಲರ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಪ್ರೇರೇಪಿಸುವಂತೆ ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read