HomeKarnatakaಪೌರಕಾರ್ಮಿಕರ ಕಾಯಕಕ್ಕೆ ಗೌರವ, ಬದುಕಿಗೆ ಭರವಸೆ: ಸರ್ಕಾರದ ಮಹತ್ವದ ಘೋಷಣೆಗಳು

ಪೌರಕಾರ್ಮಿಕರ ಕಾಯಕಕ್ಕೆ ಗೌರವ, ಬದುಕಿಗೆ ಭರವಸೆ: ಸರ್ಕಾರದ ಮಹತ್ವದ ಘೋಷಣೆಗಳು

ನಗರವನ್ನು ಸ್ವಚ್ಛವಾಗಿಡುವ ಕಾಯಕಜೀವಿಗಳಾದ ಪೌರಕಾರ್ಮಿಕರ ಬದುಕು ಕೂಡ ಗೌರವಯುತವಾಗಿರಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಉಪಹಾರ ಭತ್ಯೆ ₹35ರಿಂದ ₹70ಕ್ಕೆ ಹೆಚ್ಚಳ,  ಮನೆ ನಿರ್ಮಾಣಕ್ಕೆ ₹7.5 ಲಕ್ಷ ನೆರವು ಹೀಗೆ ಹಲವಾರು ಯೋಜನೆಗಳನ್ನು ಘೋಷಿಸಿದೆ. ಪೌರಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತರಲು ಸರ್ಕಾರ ಸದಾ ಬದ್ಧವಾಗಿದೆ.

ಪೌರಕಾರ್ಮಿಕರ ಅಭಿವೃದ್ಧಿಗಾಗಿ ಸರ್ಕಾರದ ಮಹತ್ವದ ಘೋಷಣೆಗಳು

ಸಮತಳ ಮೀಸಲಾತಿಯಡಿ ನಿಗದಿಪಡಿಸಿರುವ ಹುದ್ದೆಗಳಿಗೆ ಎಸ್‌ಸಿ, ಎಸ್‌ಟಿ ಅರ್ಹ ಪೌರಕಾರ್ಮಿಕರನ್ನು ಪರಿಗಣಿಸಲು ಅವಕಾಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೌರಕಾರ್ಮಿಕರಿಗೆ ಪ್ರತಿ ತಿಂಗಳು ವೇತನ ಪಾವತಿಯಾಗುವುದನ್ನು ಖಾತರಿಪಡಿಸಲು ‘ಎಸ್ಕೋ ಖಾತೆ’

ನೇರ ಪಾವತಿ ಪೌರಕಾರ್ಮಿಕರಿಗೆ ಹೊಸದಾಗಿ ಪ್ರತಿ ತಿಂಗಳು ₹5,000 ವಿಶೇಷ ಭತ್ಯೆ

ಪೌರಕಾರ್ಮಿಕರ ಬೆಳಗಿನ ಉಪಹಾರ ಭತ್ಯೆ ₹35ರಿಂದ ₹70ಕ್ಕೆ ಹೆಚ್ಚಳ

ಖಾಯಂ ಪೌರಕಾರ್ಮಿಕರಿಗೆ ನೀಡುವ ವಿಶೇಷ ಭತ್ಯೆ ₹7,000ರಿಂದ ₹10,000ಕ್ಕೆ ಹೆಚ್ಚಳ

ಪೌರಕಾರ್ಮಿಕರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಕೆಪಿಎಸ್ ಮಾದರಿಯಲ್ಲಿ ವಿಶೇಷ ವಸತಿ ಶಾಲೆ ಹಾಗೂ ಪೌರಭವನ ನಿರ್ಮಾಣ

ರವೀಂದ್ರ ಕಲಾಕ್ಷೇತ್ರದಲ್ಲಿ ‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ ವೀಕ್ಷಿಸಿದ ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “ಮುಖ್ಯಮಂತ್ರಿ” ನಾಟಕದ 900ನೇ ಪ್ರದರ್ಶನವನ್ನು ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ ವೀಕ್ಷಿಸಿದ್ದಾರೆ.

ಡಾ. ಮುಖ್ಯಮಂತ್ರಿ ಚಂದ್ರು ಅವರ ‘ಮುಖ್ಯಮಂತ್ರಿ’ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಕನ್ನಡ ರಂಗಭೂಮಿಯ ಶ್ರೇಷ್ಠ ಕೃತಿಗಳಲ್ಲೊಂದಾದ ‘ಮುಖ್ಯಮಂತ್ರಿ’ ನಾಟಕವು ಸಾಮಾಜಿಕ ಮತ್ತು ರಾಜಕೀಯ ಬದುಕಿನ ಹಲವು ಆಯಾಮಗಳನ್ನು ಕಲಾತ್ಮಕವಾಗಿ ತೆರೆದಿಟ್ಟಿದೆ. ರಂಗಭೂಮಿಯ ಈ ಪರಂಪರೆ ಮುಂದಿನ ಪೀಳಿಗೆಗೂ ತಲುಪಲಿ ಎಂದು ಆಶಿಸುತ್ತೇನೆ ಎಂದರು.

ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿ, ಮುಖ್ಯಮಂತ್ರಿ ಚಂದ್ರು ನನ್ನ ಆತ್ಮೀಯ ಸ್ನೇಹಿತರಾಗಿದ್ದು, ಹಲವು ವರ್ಷಗಳಿಂದ ಅವರೊಂದಿಗೆ ನನ್ನ ಒಡನಾಟವಿದೆ. ಚಂದ್ರು ಅವರ ಈ ವಿಶೇಷ ಸಾಧನೆಯ ಸಂದರ್ಭದಲ್ಲಿ ಅವರ ಧರ್ಮಪತ್ನಿ, ಕುಟುಂಬದ ಸದಸ್ಯರು ಹಾಗೂ ಒಡನಾಡಿಗಳು ಸೇರಿ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ತಂದಿದೆ ಎಂದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ನಟ ರವಿಚಂದ್ರನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವಾಯುಭಾರ ಕುಸಿತ ಹಿನ್ನೆಲೆ ನಾಳೆಯಿಂದ 4 ದಿನ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು:  ವಾಯುಭಾರ ಕುಸಿತ ಉಂಟಾದ ಪರಿಣಾಮ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರ ನಾಳೆಯಿಂದ ಅಕ್ಟೋಬರ್ 1 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಚಾಮರಾಜನಗರ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ತುಮಕೂರು, ಶಿವಮೊಗ್ಗ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ವಿಜಯನಗರ, ಬಳ್ಳಾರಿ, ದಾವಣಗೆರೆ ಭಾಗದಲ್ಲಿ ಮಳೆಯಾಗಲಿದೆ.

ಸೆಪ್ಟೆಂಬರ್ 28ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 29ರಂದು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಕ್ಟೋಬರ್ 1ರವರೆಗೆ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular