HomeKarnatakaCAR/DAR ಪೊಲೀಸ್ ನೇಮಕಾತಿ ಪರೀಕ್ಷೆ ಮುಗಿದ ಕೇವಲ 5 ದಿನದಲ್ಲೇ ಫಲಿತಾಂಶ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ...

CAR/DAR ಪೊಲೀಸ್ ನೇಮಕಾತಿ ಪರೀಕ್ಷೆ ಮುಗಿದ ಕೇವಲ 5 ದಿನದಲ್ಲೇ ಫಲಿತಾಂಶ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಸೆ. 14 ಕೊನೆ ದಿನ

ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) ಹುದ್ದೆಗಳಿಗೆ ಸೆ.6ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ದಾಖಲೆ ಅವಧಿ ಅಂದರೆ ಪರೀಕ್ಷೆ ನಡೆದು ಕೇವಲ ಐದು ದಿನಗಳಲ್ಲಿಯೇ ಫಲಿತಾಂಶ ಪ್ರಕಟಿಸಿದೆ.

ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಸೆ.14ರಂದು ಸಂಜೆ‌ 5.30ರೊಳಗೆ ನಿಗದಿತ ಲಿಂಕ್ (https://cetonline.Karnataka.in/kea/) ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಸೆ.10ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಫಲಿತಾಂಶ ಪ್ರಕಟ

ಪೊಲೀಸ್‌ ಇಲಾಖೆಯಿಂದ ಅಧಿಸೂಚಿಸಲಾದ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ ಟೇಬಲ್ (CAR/DAR) ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಿದಂದ ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/DAR) ನೇಮಕಾತಿ ಸಂಬಂಧ ದಿನಾಂಕ 06.09.2026 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ದಿನಾಂಕ 07.09.2026 ರಂದು ಪ್ರಕಟಿಸಿ ದಿನಾಂಕ 09.09.2026 ರ ಬೆಳಿಗ್ಗೆ 10.30 ರವರೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.

ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಮೂಲಕ ಪರಿಶೀಲಿಸಿ ದಿನಾಂಕ: 10.09.2026 ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿರುತ್ತದೆ.

ಪರಿಷ್ಕೃತ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ 14.09.2026 ದಿನಾಂಕ ಸಂಜೆ 5.30 ರೊಳಗೆ ನಿಗದಿತ (https://cetonline.karnataka.gov.in/kea/) ថ ថថ ม . ಲಿಂಕ್ ದಾಖಲೆಗಳಿಲ್ಲದ ಹಾಗೂ ಕೀ ಉತ್ತರಗಳಿಗೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಜವಾಹರ ನವೋದಯ ವಿದ್ಯಾಲಯದ 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನ ಪಿಎಂ ಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ 9 ಮತ್ತು 11ನೇ ತರಗತಿ ಸ್ಥಾನಗಳಿಗೆ ಲ್ಯಾಟರಲ್ ಎಂಟ್ರಿ ಸೆಲೆಕ್ಷನ್ ಟೆಸ್ಟ್ (LEST-2027) ಮೂಲಕ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಲ್ಲಿ 8ನೇ ತರಗತಿ ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.

LEST-2027 ಪರೀಕ್ಷೆಯು 2027ರ ಏಪ್ರಿಲ್ 10ರಂದು ಶನಿವಾರ ನಡೆಯಲಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2026ರ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

ನವೋದಯ ವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಅಥವಾ 9ನೇ ತರಗತಿಗೆ cbseitms.nic.in/2026/nvsix  ಹಾಗೂ 11ನೇ ತರಗತಿಗೆ cbseitms.nic.in/2026/nvsxi_11 ವೆಬ್‌ಸೈಟ್‌ಗಳಿಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ವಿದ್ಯಾಲಯದ 9844478098, 7624831601, 080-29900456 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular