ಧರ್ಮಸ್ಥಳದ : ‘ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಸಂಸದ, ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು ಮುಸುಕುಧಾರಿ ತಮಿಳುನಾಡು ಮೂಲದವನು. ಇಲ್ಲಿವರೆಗೂ ಅವನು ಅಲ್ಲಿಯೇ ವಾಸಿಸುತ್ತಿದ್ದನು. ಆ ಮುಸುಕುಧಾರಿಗೂ ಸಸಿಕಾಂತ್ ಗೂ ನಂಟಿದೆ. ಮಾಸ್ಕ್ ಮ್ಯಾನ್ ಗೆ ಬುರುಡೆ ಕೊಟ್ಟಿದ್ದೇ ಅವರು. ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಟರ್ ಮೈಂಡ್ ಸೆಂಥಿಲ್ ಎಂದು ಆರೋಪ ಮಾಡಿದ್ದಾರೆ.
ಈ ಪ್ರಕರಣವನ್ನ ಸಿಬಿಐ ಅಥವಾ ಎನ್ ಐ ಎ ತನಿಖೆಗೆ ನಡೆಸಬೇಕು. ಇಲ್ಲವಾದಲ್ಲಿ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ ಜಡ್ಜ್ ಮೂಲಕ ತನಿಖೆ ಆಗಬೇಕು ಎಂದು ಜನಾರ್ಧನ ರೆಡ್ಡಿ ಆಗ್ರಹಿಸಿದ್ದಾರೆ.