ಬೆಂಗಳೂರು: ಶಾಸಕ ಹಾಗೂ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ವಿರುದ್ಧ ಕರ್ನಾಟಕ ಕೇಡರ್ ನ ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಸದ ಸಸಿಕಾಂತ್ ಸೆಂಥಿಲ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ.
ಸೆಪ್ಟೆಂಬರ್ 29ರಂದು ನ್ಯಾಯಾಲಯವು ದೂರಿನ ಕುರಿತು ಸಂಸದ ಸಸಿಕಾಂತ್ ಸೆಂಥಿಲ್ ಅವರ ಸ್ವಯಂ ಹೇಳಿಕೆ ದಾಖಲಿಸಲು ವಿಚಾರಣೆ ನಿಗದಿಪಡಿಸಿದೆ. ಧರ್ಮಸ್ಥಳ ಸಾಮೂಹಿಕ ಮೃತದೇಹಗಳ ಅಂತ್ಯಸಂಸ್ಕಾರ, ಬುರುಡೆ ಸಾಕ್ಷ್ಯ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಮಾಸ್ಟರ್ ಮೈಂಡ್ ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದರು. ಈ ಈ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ಅವರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದ ಸಂಸದ ಸಸಿಕಾಂತ್ ಸೆಂಥಿಲ್ ಅವರು ಸೆ.6ರಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಖಾಸಗಿ ದೂರು ದಾಖಲಿಸಿದ್ದರು.