HomeLatest Newsಜನಾರ್ಧನ ರೆಡ್ಡಿ ವಿರುದ್ಧ ಸಸಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆ ದೂರು ವಿಚಾರಣೆಗೆ ಅಂಗೀಕಾರ: ಹೇಳಿಕೆ ದಾಖಲಿಸಲು...

ಜನಾರ್ಧನ ರೆಡ್ಡಿ ವಿರುದ್ಧ ಸಸಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆ ದೂರು ವಿಚಾರಣೆಗೆ ಅಂಗೀಕಾರ: ಹೇಳಿಕೆ ದಾಖಲಿಸಲು ದಿನಾಂಕ ನಿಗದಿ

ಬೆಂಗಳೂರು: ಶಾಸಕ ಹಾಗೂ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ವಿರುದ್ಧ ಕರ್ನಾಟಕ ಕೇಡರ್ ನ ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಸದ ಸಸಿಕಾಂತ್ ಸೆಂಥಿಲ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ.

ಸೆಪ್ಟೆಂಬರ್ 29ರಂದು ನ್ಯಾಯಾಲಯವು ದೂರಿನ ಕುರಿತು ಸಂಸದ ಸಸಿಕಾಂತ್ ಸೆಂಥಿಲ್ ಅವರ ಸ್ವಯಂ ಹೇಳಿಕೆ ದಾಖಲಿಸಲು ವಿಚಾರಣೆ ನಿಗದಿಪಡಿಸಿದೆ. ಧರ್ಮಸ್ಥಳ ಸಾಮೂಹಿಕ ಮೃತದೇಹಗಳ ಅಂತ್ಯಸಂಸ್ಕಾರ, ಬುರುಡೆ ಸಾಕ್ಷ್ಯ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಮಾಸ್ಟರ್ ಮೈಂಡ್ ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದರು. ಈ ಈ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ಅವರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದ ಸಂಸದ ಸಸಿಕಾಂತ್ ಸೆಂಥಿಲ್ ಅವರು ಸೆ.6ರಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಖಾಸಗಿ ದೂರು ದಾಖಲಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular