ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ನಾಯಕನಾಗಿ ಅಭಿನಯಿಸಿರುವ ಕಾದಾಟ ಚಿತ್ರ ಇದೆ ಜುಲೈ 5ಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ ಅಂದುಕೊಂಡಂತೆ ಆಗಿದ್ದರೆ ಜೂನ್ 27ಕ್ಕೆ ಈ ಸಿನಿಮಾ ತೆರೆ ಮೇಲೆ ಬರಬೇಕಿತ್ತು ಕಾರಣಾಂತರದಿಂದ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ.
ಸತೀಶ್ ಮಲೆಂಪಾಟಿ ನಿರ್ದೇಶನದ ಈ ಚಿತ್ರದಲ್ಲಿ ಆದಿತ್ಯ ಶಶಿಕುಮಾರ್ ಅವರಿಗೆ ಜೋಡಿಯಾಗಿ ಲಾವಣ್ಯ ಹಾಗೂ ಚಾಂದಿನಿ ಅಭಿನಯಿಸಿದ್ದಾರೆ. ರವಿಕಾಳೆ, ಮಾರಿಮುತ್ತು, ಪ್ರೇಮ್ ಮನೋಹರ್, ಶ್ರವಣ್ ರಾಘವೇಂದ್ರ, ಹಾಗೂ ಪೋಸಾನಿ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಅರುಣಂ ಫಿಲ್ಮ್ಸ್ ಸಂಸ್ಥೆ ನಿರ್ಮಾಣ ಮಾಡಿದ್ದು, ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜನೆ ನೀಡಿದ್ದಾರೆ ಪ್ರಕಾಶ್ ತೋಟ ಸಂಕಲನ ಡಿ. ಯೋಗಿಪ್ರಸಾದ್ ಛಾಯಾಗ್ರಹಣವಿದೆ.