HomeKarnatakaಸಚಿವ ಸತೀಶ್ ಜಾರಕಿಹೊಳಿ ಆಪ್ತರ ಮನೆ ಮೇಲೂ ಇಡಿ ದಾಳಿ: ಬೆಳಗಾವಿಯ 5 ಕಡೆ ರೇಡ್

ಸಚಿವ ಸತೀಶ್ ಜಾರಕಿಹೊಳಿ ಆಪ್ತರ ಮನೆ ಮೇಲೂ ಇಡಿ ದಾಳಿ: ಬೆಳಗಾವಿಯ 5 ಕಡೆ ರೇಡ್

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಸತೀಶ್ ಜಾರಕಿಹೊಳಿ ಅವರ ಬಾಮೈದ ಮಂಜುನಾಥ್ ಹಾಗೂ ಜಾರಕಿಹೊಳಿ ಆಪ್ತರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಬಕಾರಿ ಪರವಾನಗಿ ಹಗರಣಕ್ಕೆ ಸಂಬಂಧಿಸಿದಂತೆ ಹಾಗೂ ವಿದೇಶಿ ಅಕ್ರಮ ಹಣ, ಹವಾಲಾ ಜಾಲದ ನಂಟು ಅನುಮಾನದ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಮುಂಜಾನೆಯೇ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅತ್ತ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿರುವ ಮನೆ, ಕಚೇರಿ ಮಗಳು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಚೇರಿ, ಮಗ ರಾಹುಲ್ ಜಾರಕಿಹೊಳಿಗೆ ಸೇರಿದ ಜಾಗಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಬಾಮೈದ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ಮನೆ ಮೇಲೆ ಎರಡನೇ ಬಾರಿ ಇಡಿ ದಾಳಿ ನಡೆದಿದೆ. ಕಳೆದ ಜೂನ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಮಂಜುನಾಥ್ ಅವರ ಮನೆ, ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಅಥಣಿ ಪ್ರದೇಶಗಳಲ್ಲಿ ಇಡಿ ಸುದೀರ್ಘ ದಾಳಿ ನಡೆಸಿತ್ತು.

ಬಾರ್ ಲೈಸೆನ್ಸ್ ನೀಡುವಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆ ನಡೆದಿದ್ದ ಆ ಕಾರ್ಯಾಚರಣೆಯ ವೇಳೆ ಮಂಜುನಾಥ್ ಮನೆಯಲ್ಲಿ ನೂರಾರು ಬೇನಾಮಿ ಬಾರ್ ಲೈಸೆನ್ಸ್, 5.5 ಲಕ್ಷ ರೂ. ನಗದು ಹಾಗೂ ಬರೋಬ್ಬರಿ 13.3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿತ್ತು. ಅಲ್ಲದೇ ಮಂಜುನಾಥ್ ನಿವಾಸದಲ್ಲಿ ಡೈರಿಯೊಂದು ಪತ್ತೆಯಾಗಿತ್ತು. ಈ ಡೈರಿ ಆಧಾರದ ಮೇಲೆ ಜೂನ್ 24ರಿಂದ ಇ.ಡಿ. ಅಧಿಕಾರಿಗಳು ಕೂಲಂಕುಷ ತನಿಖೆ ನಡೆಸಿದ್ದು, ಮಹತ್ವದ ಸುಳಿವು ದೊರೆತಿದೆ ಎನ್ನಲಾಗಿದೆ. ಡೈರಿಯಲ್ಲಿನ ಮಾಹಿತಿಯನ್ನಾಧರಿಸಿ ಸತೀಶ್ ಜಾರಕಿಹೊಳಿ ಅವರ ಪಾತ್ರದ ಬಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಇನ್ನು ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ.ಗಿರೀಶ್ ಸೋನ್ವಾಲಕರ್, ರಾಜು ಧರಮಶೆಟ್ಟಿ ಹಾಗೂ ವಿಠಲ ಪರಸನ್ನವರ್ ಅವರ ಮನೆ, ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ.

ಡಾ. ಗಿರೀಶ್ ಸೋನ್ವಾಲಕರ್ ಅವರ ಬೆಳಗಾವಿ ನಗರದ ಲಕ್ಷ್ಮೀ ಟೇಕ್ ನಲ್ಲಿರುವ ನಿವಾಸ, ರಾಜು ಧರಮಶೆಟ್ಟಿ ಅವರ ಗೋಕಾಕ್ ನಿವಾಸ ಹಾಗೂ ವಿಠಲ ಪರಸನ್ನವರ್ ಅವರ ಗೋಕಾಕ್ ನಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular