HomeAgricultureಸಂಕಷ್ಟದಲ್ಲಿರುವ ರೈತರ ನೆರವಿಗೆ ಇಂದಿನಿಂದ 3 ದಿನ ಮೋಡ ಬಿತ್ತನೆ: ಸಚಿವ ಸತೀಶ್ ಜಾರಕಿಹೊಳಿ

ಸಂಕಷ್ಟದಲ್ಲಿರುವ ರೈತರ ನೆರವಿಗೆ ಇಂದಿನಿಂದ 3 ದಿನ ಮೋಡ ಬಿತ್ತನೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬೆಳಗಾಂ ಶುಗರ್ಸ್ ಮುಂದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೆ. 29ರಿಂದ 3 ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಮೋಡ ಬಿತ್ತನೆಯ ಖರ್ಚು ವೆಚ್ಚವನ್ನು ಬೆಳಗಾಂ ಶುಗರ್ಸ್ ಭರಿಸಲಿದೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಮೋಡ ಬಿತ್ತನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಮೋಡ ಬಿತ್ತನೆಯ ವಿಮಾನಗಳು ಕಾರ್ಯಾಚರಣೆ ನಡೆಸಲಿವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮೋಡಗಳ ಲಭ್ಯತೆಗೆ ಅನುಗುಣವಾಗಿ ಅಲ್ಲಲ್ಲಿ ಮೂಡಬಿತ್ತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular