HomeKarnatakaBIG NEWS: ಈಗ ಸಿಎಂ ಸ್ಥಾನ ಖಾಲಿ ಇಲ್ಲ, 2028ಕ್ಕೆ ನಾನು ಬೇಡಿಕೆ ಇಡುತ್ತೇನೆ: ಸತೀಶ...

BIG NEWS: ಈಗ ಸಿಎಂ ಸ್ಥಾನ ಖಾಲಿ ಇಲ್ಲ, 2028ಕ್ಕೆ ನಾನು ಬೇಡಿಕೆ ಇಡುತ್ತೇನೆ: ಸತೀಶ ಜಾರಕಿಹೊಳಿ

ಬೆಂಗಳೂರು: ಈಗ ಸಿಎಂ ಸ್ಥಾನ ಖಾಲಿ ಇಲ್ಲ, 2028ಕ್ಕೆ ನಾನು ಬೇಡಿಕೆ ಇಡುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಸತೀಶ ಜಾರಕಿಹೊಳಿ ಸಿಎಂ ಆಗಬೇಕೆಂದು ವಾಲ್ಮೀಕಿ ಸ್ವಾಮೀಜಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 2028ಕ್ಕೆ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಹುದ್ದೆ ಬೇರೆಯವರು ಕೇಳುವುದು ಅವರ ಇಷ್ಟ. ನಾನು 2028 ರಲ್ಲಿ ಸಿಎಂ ಸ್ಥಾನಕ್ಕೆ ಬೇಡಿಕೆ ಇಡುತ್ತೇನೆ. ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿದ್ದಾರೆ. ಬೇರೆಯವರು ಹೇಳುವ ಅಗತ್ಯವಿಲ್ಲ. ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಬದಲಾವಣೆ ಪರಿಸ್ಥಿತಿ ಉದ್ಭವಿಸಿಲ್ಲ. ಪಕ್ಷದ ತೀರ್ಮಾನವೇ ನನ್ನ ತೀರ್ಮಾನ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ಮೋದಿ ಟೀಕಿಸಿದ ವಿಚಾರ ಬಗ್ಗೆ ಪ್ರತಿಕ್ರಿಯೆ ನೀಡಿದ ಸತೀಶ ಜಾರಕಿಹೊಳಿ, ಮೋದಿಯವರು ರಾಜಕೀಯ ಭಾಷಣ ಮಾಡುತ್ತಾರೆ. ನಮ್ಮ ಪಕ್ಷದಲ್ಲಿ ವಾಕ್ ಸ್ವಾತಂತ್ರ್ಯ ಇದೆ. ಬಿಜೆಪಿಯಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular