BIG NEWS: ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ: ಪ್ರಸನ್ನಾನಂದ ಸ್ವಾಮೀಜಿ ಒತ್ತಾಯ

ಬಾಗಲಕೋಟೆ: “ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಬದಲಾವಣೆ ಆದರೆ ದಲಿತ ಸಿಎಂಗೆ ಅವಕಾಶ ಸಿಗಲಿ. ಅದರಲ್ಲಿಯೂ ಸತೀಶ ಜಾರಕಿಹೊಳಿ ಅರ್ಹ ವ್ಯಕ್ತಿಯಾಗಿದ್ದಾರೆ. ಅವರು ಮುಖ್ಯಮಂತ್ರಿಯಾಗಲಿ.”

ಹೀಗೆಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ. ಬಾಗಲಕೋಟೆಯಲ್ಲಿ ವಾಲ್ಮೀಕಿ ಸಮಾಜದ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ದಲಿತರು ಮುಖ್ಯಮಂತ್ರಿ ಆದರೆ ತಪ್ಪೇನು? ಅವಕಾಶ ದೊರೆತರೆ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗಲಿ ಎಂದು ಹೇಳಿದ್ದಾರೆ.

ಮೂಲಭೂತವಾದಿಗಳಿಗೆ ರಾಮನ ಆದರ್ಶ ಬೇಕು. ಆದರೆ, ವಾಲ್ಮೀಕಿ ಬೇಡವಾಗಿದ್ದಾರೆ. ನಾವು ಬರೀ ವೋಟ್ ಬ್ಯಾಂಕ್ ಆಗುವುದು ಬೇಡ. ವೈಚಾರಿಕತೆ ಮೂಲಕ ಸತೀಶ್ ಜಾರಕಿಹೊಳಿ ಎಲ್ಲರ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.

ಅಂಬೇಡ್ಕರ್ ಸಂವಿಧಾನದಲ್ಲಿ ನಮಗೆ ಅವಕಾಶ ನೀಡಿದ್ದರೂ, ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ ರಾಜಕೀಯ ಸ್ಥಾನಮಾನಕ್ಕಾಗಿ ಅವಕಾಶ ಕೇಳುವ ಪರಿಸ್ಥಿತಿ ಇರುವುದು ವಿಪರ್ಯಾಸ. ಸತೀಶ ಜಾರಕಿಹೊಳಿಗೆ ನಾಡಿನ ದೊರೆಯಾಗುವ ಶಕ್ತಿ ಇದ್ದು, ಅವರೊಂದಿಗೆ ನಾವು ಗಟ್ಟಿಯಾಗಿ ನಿಲ್ಲುತ್ತೇವೆ. ರಾಜಕೀಯ ಪಕ್ಷಗಳು ದಲಿತ ಮುಖ್ಯಮಂತ್ರಿ ನಿರ್ಧರಿಸುವ ಬಗ್ಗೆ ಔದಾರ್ಯತೆ ತೋರಬೇಕು. ಇದರಿಂದ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಶ್ರೀಗಳು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read