BIG NEWS: ಬಹಿರಂಗ ಹೇಳಿಕೆ: ಸಚಿವರ ವರದಿ ಸಲ್ಲಿಸಲು ಹೈಕಮಾಂಡ್ ಸೂಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದ್ದು, ಸಚಿವರುಗಳೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ನಮಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ಆದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ ನೀಡಿದ್ದರು. ಸಚಿವರ ಹೇಳಿಕೆ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.

ಇದರ ಬೆನ್ನಲ್ಲೇ ಹೈಕಮಾಂಡ್ ನಾಯಕರು ಖಡಕ್ ಸೂಚನೆಯೊಂದಿಗೆ ಸಚಿವರ ಬಗ್ಗೆ ವರದಿ ಕೇಳಿದೆ. ಹೈಕಮಾಂಡ್ ಆದೇಶ ಉಲ್ಲಂಘಿಸುವವರು ಕಾಂಗ್ರ್ಸ್ ನ ಶಿಸ್ತಿನ ಸಿಪಾಯಿಗಳಲ್ಲ ಎಂದು ಹೈಕಮಂಡ್ ಹೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.

ಈ ಬೆಳವಣಿಗೆ ಬಳಿಕ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read