HomeKarnatakaನನ್ನ ವಿರುದ್ಧ ಇಡಿ ಅಧಿಕಾರಿಗಳಿಗೆ ದೂರು ಕೊಟ್ಟಿದ್ದು ಯಾರೆಂದು ಗೊತ್ತಿದೆ; ಸಿಎಂ ಗಮನಕ್ಕೆ ತಂದಿದ್ದೇನೆ ಎಂದ...

ನನ್ನ ವಿರುದ್ಧ ಇಡಿ ಅಧಿಕಾರಿಗಳಿಗೆ ದೂರು ಕೊಟ್ಟಿದ್ದು ಯಾರೆಂದು ಗೊತ್ತಿದೆ; ಸಿಎಂ ಗಮನಕ್ಕೆ ತಂದಿದ್ದೇನೆ ಎಂದ ಸತೀಶ್ ಜಾರಕಿಹೊಳಿ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 36 ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದರು. ಇಡಿ ದಾಳಿ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ ಇಡಿ ಅಧಿಕಾರಿಗಳಿಗೆ ದೂರು ಕೊಟ್ಟವರ ಬಗ್ಗೆ ನನಗೆ ಗೊತ್ತಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನನ್ನ ವಿರುದ್ಧ ಇಡಿಗೆ ದೂರು ಕೊಟ್ಟವರು ಯಾರು ಅಂತ ಗೊತ್ತಿದೆ, ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್​ ಗಮನಕ್ಕೆ ತಂದಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲ್ಲಿ ನಮ್ಮ ಪಕ್ಷದವರು ಇರಬಹುದು. ಯಾರೇ ಇದ್ದರೂ ಮುಖ್ಯಮಂತ್ರಿಗಳು ಗಮನವಹಿಸುತ್ತಾರೆ. ಬಿಜೆಪಿಯವರಿರಬಹುದು ಅಥವಾ ಅವರ ಸಂಬಂಧಿ ಇರಬಹುದು. 50:50 ಇದೆ, ಯಾರು ಅಂತಾ ಅವರಿಗೆ ಗೊತ್ತಿದೆ, ಹೇಳಿದ್ದೇವೆ ಎಂದು ತಿಳಿಸಿದರು.

ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದರೆ ದಾಖಲೆ ಕೊಡುತ್ತೇವೆ. ಹೂಡಿಕೆ ಅಂದರೆ ಅಧಿಕೃತವಾಗಿ ವರ್ಗಾವಣೆ ಆಗಬೇಕಲ್ಲವೇ? ಹೆಚ್ಚಿನ ತನಿಖೆ ಮಾಡಬೇಕೆಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ನೋಟಿಸ್ ಕೊಟ್ಟು ಕರೆಸಿದರೆ ಸರಿಯಾದ ಉತ್ತರ ಕೊಡುತ್ತೇನೆ. ಇಡಿ ಅಧಿಕಾರಿಗಳು ಕರೆಯಲಿ, ಉತ್ತರ ಕೊಡುತ್ತೇನೆ ಎಂದರು.

ಹೂಡಿಕೆ‌ ಮಾಡಿಲ್ಲ ಅಂತಾ ಇಡಿ ಅಧಿಕಾರಿಗಳಿಗೆ ಹೇಳಿದ್ದೇನೆ. ಇನ್ನೂ ಬಹಳ ಪ್ರಕ್ರಿಯೆ ಇದೆ, 3-6 ತಿಂಗಳ ಅವಕಾಶ ಇದೆ. ಅನುಮಾನಾಸ್ಪದ ಅಂತಾ ಹೇಳಿದ್ದಾರೆ, ಇದೇ ಫೈನಲ್ ಅಲ್ಲ. ಇನ್ನೂ ಪ್ರಗತಿ ಹಂತದಲ್ಲಿದೆ ಅಂತಾ ಪ್ರೆಸ್​ನೋಟ್​ನಲ್ಲೇ ಇದೆ. ಮೇಲ್ನೋಟಕ್ಕೆ ಹೂಡಿಕೆ ಇದೆ ಅಂತಿದ್ದಾರೆ’ ಎಂದರು.

ಇನ್ನೂ 4-5 ಜನರ ಮೇಲೆ ಇಡಿ ದಾಳಿ ಆಗಬಹುದು ಅಂತ ಸಿಎಂ ಹೇಳಿದ್ದಾರೆ. ಇಡಿ ಹೆಚ್ಚಿನ ವಿಚಾರಣೆ ನಡೆಸಲಿ, ಆರೋಪ ಸಾಬೀತಾಗಲಿ. ಈ ಆರೋಪದ ಬಗ್ಗೆ ಯಾವುದೇ ನಿರ್ಧಾರಕ್ಕೆ ಬರಲ್ಲ. ಇಡಿ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹೋಗುತ್ತೇವೆ. ನಮ್ಮ ಸೇಫ್ಟಿಯಲ್ಲಿ ನಾವು ಇರಬೇಕು. ರಾಜಕಾರಣದಲ್ಲಿ ಇದೆಲ್ಲಾ ಸಾಮಾನ್ಯ, ಅವರಿಗೆ ಕೇಳೋ ಅಧಿಕಾರ ಇದೆ ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆಯಲ್ಲಿ ಭ್ರಷ್ಟಾಚಾರ: ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ವೇಳೆ ದಾಖಲುಗಳು ಪತ್ತೆ:

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದ ಜಾರಿ ನಿರ್ದೇಶನಾಲಯ (ಇಡಿ) ದಾಳಿ ವೇಳೆ ಲೋಕೋಪಯೋಗಿ ಇಲಾಖೆಯಲ್ಲಿ ಭ್ರಷ್ಟಚಹಾರ ನಡೆದಿರುವ ಬಗ್ಗೆ ದಾಖಲೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇಡಿ ದಾಳಿ ವೇಳೆ ಲೋಕೋಪಯೋಗಿ ಇಲಾಖೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಪತ್ತೆಯಾಗಿವೆ. ಅಲ್ಲದೇ BVEPL ಕಂಪನಿಯಿಂದ ಕಿಕ್ ಬ್ಯಾಕ್ ಪಡೆದಿರುವ ಆರೋಪದ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಇಡಿ ಅಧಿಕಾರಿಗಳು ಈ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿ ಮಂತ್ರಿಗಳ ವಿರುದ್ಧ ನೇರವಾಗಿ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲು ಇಡಿ ಸಂಸ್ಥೆಗೆ ಅಧಿಕಾರವಿಲ್ಲ. ಈ ಹಿನ್ನೆಲೆ ಪತ್ತೆಯಾಗಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳ ಆಧಾರದ ಮೇಲೆ, ಲೋಕಾಯುಕ್ತ ಎಡಿಜಿಪಿಗೆ ಪತ್ರ ಬರೆಯಲು ಇಡಿ ಮುಂದಾಗಿದೆ.

ಲೋಕಾಯುಕ್ತ ಸಂಸ್ಥೆಯು ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಇಡಿ ಕೋರಲಿದೆ. ಈ ಹಿನ್ನೆಲೆಯಲ್ಲಿ ಇಡಿ ದಾಳಿ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಲೋಕಾಅಯುಲ್ಕ್ತ ಶಾಕ್ ಎದುರಾಗುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular