HomeLive NewsBREAKING: ಸ್ವಾಮೀಜಿಗಳಿಗೂ ಸಿಎಂ ಬದಲಾವಣೆ ಚರ್ಚೆಗೂ ಏನು ಸಂಬಂಧ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

BREAKING: ಸ್ವಾಮೀಜಿಗಳಿಗೂ ಸಿಎಂ ಬದಲಾವಣೆ ಚರ್ಚೆಗೂ ಏನು ಸಂಬಂಧ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ರಂಭಾಪುರಿ ಶ್ರೀಗಳು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿರುವ ನಡುವೆಯೇ ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳಿಗೂ ರಾಜಕೀಯಕ್ಕೂ ಏನು ಸಂಬಂಧ, ಸಿಎಂ ಬದಲಾವಣೆ ವಿಚಾರ ಅವರಿಗೇನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತಿಶ್ ಜಾರಕಿಹೊಳಿ, ಸಿಎಂ ಬದಲಾವಣೆ ಅದು ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಸ್ವಾಮೀಜಿಗಳಿಗೆ ಏನು ಸಂಬಂಧ? ಸಮಾಜಕಟ್ಟೋದು, ಆಶಿರ್ವಾದ ಮಾಡೋದು ಶ್ರೀಗಳ ಕೆಲಸ. ಈ ರೀತಿ ಹೇಳಿಕೆಗಳನ್ನು ಸ್ವಾಮೀಜಿಗಳು ಕೊಡಬಾರದು ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ವಾಮೀಜಿಗಳಿಗೂ ಮುಖ್ಯಮಂತ್ರಿ ಬದಲಾವಣೆಗೂ ಯಾವುದೇ ಸಂಬಂಧ ಬರಲ್ಲ. ಅವರ ಕಾರ್ಯವ್ಯಾಪ್ತಿ ಬೇರೆ, ನಮ್ಮ ಕಾರ್ಯವ್ಯಾಪ್ತಿ ಬೇರೆ. ಸಿಎಂ ಆಯ್ಕೆ ಮಾಡುವುದು ಶಾಸಕರು ಹಾಗೂ ಹೈಕಮಾಂಡ್. ಸಿಎಂ ಬದಲಾವಣೆ ಚರ್ಚೆಯಿಂದ ಅನವಶ್ಯಕ ಗೊಂದಲ ಸೃಷ್ಟಿಯಾಗುತ್ತಿದೆ. ಕೆಲವರು ಬದಲಾವಣೆಯಾಗಬೇಕು ಅಂತಾರೆ, ಕೆಲವರು ಬೇಡ ಅಂತಾರೆ. ಈ ಬಗ್ಗೆ ಸಿಎಂ, ಡಿಸಿಎಂ ಅವರನ್ನೇ ಕೇಳಿ ಅವರೇ ಉತ್ತರ ಕೊಡುತ್ತಾರೆ. ಈಗಾಗಲೇ ಉಸ್ತುವಾರಿಗಳು, ಸಿಎಂ, ಡಿಸಿಎಂ ಸ್ಪಷ್ಟನೆ ನೀಡಿದದರೆ. ರಾಜ್ಯದಲ್ಲಿ 5 ವರ್ಷಗಳ ಕಾಲ ನಮ್ಮ ಸರ್ಕಾರ ಇರುತ್ತದೆ. ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular