BIG NEWS: ಎಂಎಲ್ ಸಿ ಸ್ಥಾನ ಉತ್ತರ ಕರ್ನಾಟಕದವರಿಗೆ ಕೊಟ್ಟರೆ ಪಕ್ಷಕ್ಕೆ ಅನುಕೂಲ: ಸಚಿವ ಸತೀಶ್ ಜಾರಕಿಹೊಳಿ ಸಲಹೆ

ಬೆಂಗಳೂರು: ವಿಧಾನ ಪರಿಷತ್ ಸ್ಥಾನವನ್ನು ಬೆಂಗಳೂರಿನವರಿಗೆ ಕೊತ್ಟರೆ ಪ್ರಯೋಜನವಿಲ್ಲ, ಉತ್ತರ ಕರ್ನಾಟಕ ಭಾಗದವರಿಗೆ ಕೊಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಎಂಎಲ್ ಸಿ ಸ್ಥಾನವನ್ನು ಉತರ ಕರ್ನಾಟಕದವರಿಗೆ ನೀಡಿದರೆ ಪಕ್ಷಕ್ಕೆ ಅನುಕೂಲವಾಗುತ್ತದೆ. ಕನಿಷ್ಟ ಎರಡು ಸ್ಥಾನವನ್ನಾದರೂ ಉತ್ತರ ಕರ್ನಾಟಕ್ಕೆ ಕೊಡಬೇಕು ಎಂದರು.

ಉತ್ತರ ಕರ್ನಾಟಕಕ್ಕೆ ಕೊಟ್ಟರೆ ಪಕ್ಷ ಹಾಗೂ ಸಮುದಾಯಕ್ಕೆ ಅನುಕೂಲವಾಗಲಿದೆ. ಬೆಂಗಳೂರಿನಲ್ಲಿ ಇದ್ದವರಿಗೆ ಕೊಟ್ಟರೆ ಪಕ್ಷಕ್ಕೆ ಅನುಕೂಲ ಆಗಲ್ಲ ಎಂದು ಹೇಳಿದರು.

ಇದೇ ವೇಳೆ ಹೆಚ್.ಡಿ.ಕುಮಾರಸ್ವಾಮಿ ಫೋನ್ ಟ್ಯಾಪ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರದಲ್ಲಿ ಬಿಜೆಪಿಯವರದ್ದೇ ಸರ್ಕಾರ ಇದೆಯಲ್ಲ, ತನಿಖೆ ಮಾಡಬಹುದಲ್ಲವೇ? ಕದ್ದಾಲಿಕೆ ಮಾಡಿದ್ದರೆ ತನಿಖೆ ಮಾಡಲಿ, ಬೇಡ ಅಂದವರ್ಯಾರು? ಎಂದು ಪ್ರಶ್ನಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read