HomeLatest Newsಬೆಳಗಾವಿ ಜಿಲ್ಲಾ ವಿಭಜನೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ: ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ

ಬೆಳಗಾವಿ ಜಿಲ್ಲಾ ವಿಭಜನೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ: ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ

ಬೆಳಗಾವಿ: ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯನ್ನು ಆಡಳಿತಾತ್ಮಕ ದೃಷ್ಟಿಯಿಂದ ವಿಭಜನೆಗೊಳಿಸಿ ಮೂರು ಜಿಲ್ಲೆಯನ್ನಾಗಿಸಬೇಕಿದೆ. ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕನ್ನು ಜಿಲ್ಲೆಯನ್ನಾಗಿ ಘೋಷಿಸಬೇಕು. ಜಿಲ್ಲಾ ವಿಭಜನೆ ಘೋಷಣೆಯನ್ನು ಯಾವ ಸಂದರ್ಭದಲ್ಲಾದರೂ ಘೋಷಣೆ ಮಾಡಬಹುದು ಎಂದು ಸಚಿವ ಸತೀಶ್ ಜಾಅರಕಿಹೊಳಿ ತಿಳಿಸಿದ್ದಾರೆ.

ಜಿಲ್ಲಾ ವಿಭಜನೆ ಯಾವುದೇ ಸಂದರ್ಭದಲ್ಲಿ ಘೋಷಿಸಬಹುದು. ಆದರೆ, ಅದು ಪೂರ್ಣಪ್ರಮಾಣದಲ್ಲಿ ಜಾರಿಯಾಗಬೇಕಾದರೆ ಐದು ವರ್ಷ ಅವಧಿಬೇಕಾಗುತ್ತದೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ, ಮೂರು ಜಿಲ್ಲೆಯನ್ನಾಗಿ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಈ ನಿಟ್ಟಿನಲ್ಲಿ ಸರ್ಕಾರ ನಿರ್ಧರಿಸಬೇಕು ಎಂದರು.

ಜೆ.ಎಚ್‌.ಪಟೇಲ್‌ ಅವಧಿಯಲ್ಲಿ ಬೆಳಗಾವಿ ಜಿಲ್ಲೆ ವಿಭಜಿಸಿ, ಚಿಕ್ಕೋಡಿ ಮತ್ತು ಗೋಕಾಕನ್ನು ಜಿಲ್ಲೆಯನ್ನಾಗಿ ಘೋಷಿಸಿ, ಗೆಜೆಟ್‌ ಹೊರಡಿಸಲಾಗಿತ್ತು. ಆಗ ಆಭಾಗದ ಜನರು ಸಂಭ್ರಮಾಚರಣೆ ಮಾಡಿದ್ದರು. ಆದರೆ, ಅದನ್ನು ರದ್ದುಗೊಳಿಸಲಾಯಿತು ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ವಿವಿಢೆದೆ ಒಟ್ಟು 42 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಪೈಕಿ 27 ಕಾಮಗಾರಿ ಪೂರ್ಣಗೊಂಡಿವೆ ಎಂದು ಇದೇ ವೇಳೆ ಸಚಿವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ 2 ವರ್ಷ ಅವಧಿ ಪೂರ್ಣಗೊಳಿಸಿದೆ. ನನಗೆ ಲೋಕೋಪಯೋಗಿ ಇಲಾಖೆ ಒಲಿದುಬಂದಿದ್ದು, ದೂರದೃಷ್ಟಿಯಿಂದ ಕೆಲಸ ಮಾಡಲಾಗುತ್ತಿದೆ. ಎಲ್ಲೆಡೆಗಳಲ್ಲಿ ಉತ್ತಮ ರಸ್ತೆಗಳಿರಬೇಕು. ನಮ್ಮ ಇಲಾಖೆಯ ಕಾಮಗಾರಿ ಎಲ್ಲರ ಕಣ್ಣಿಗೆ ಕಾಣುವಂತಹದ್ದು. ಆದರೆ, ಬೇರೆ ಇಲಾಖೆಯ ಅಭಿವೃದ್ಧಿ ಕಾಮಗಾರಿ ಕಾಣದು, ನಮ್ಮ ರಸ್ತೆಗಳು ಎಲ್ಲರ ಕಣ್ಣಿಗೆ ಕಾಣುತ್ತವೆ. ಹಾಗಾಗಿ, ಬಹಳಷ್ಟು ಜವಾಬ್ದಾರಿಯಿದೆ. ಸರ್ಕಾರ ಎರಡು ವರ್ಷ ನಮ್ಮ ಇಲಾಖೆಗೆ ಅನುದಾನವನ್ನು ನೀಡಿದೆ. ರಸ್ತೆ ಹಾಗೂ ಕಟ್ಟಡಗಳನ್ನು ನಿರ್ಮಿಸಲು ಅವಕಾಶ ನೀಡಲಾಗಿದೆ. ಹಾಗಾಗಿ, ಭೂಸ್ವಾಧೀನ ಪ್ರಕ್ರಿಯೆ, ನ್ಯಾಯಾಲಯ ಸೇರಿದಂತೆ ಇತರ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular