HomeKarnatakaಜಾರಕಿಹೊಳಿ, ಎಂ.ಬಿ.ಪಾಟೀಲ್ ಗೆ ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ಚರ್ಚೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ...

ಜಾರಕಿಹೊಳಿ, ಎಂ.ಬಿ.ಪಾಟೀಲ್ ಗೆ ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ಚರ್ಚೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮೂರು ಡಿಸಿಎಂ ಹುದ್ದೆ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈಗಾಗಲೇ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಿದ್ದು, ಅವರೊಂದಿಗೆ ಇನ್ನೂ ಎರಡು ಡಿಸಿಎಂ ಹುದ್ದೆ ಸೃಷ್ಟಿಸಲಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.

ಇದೇ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ನನಗೆ ಹಾಗೂ ಎಂ.ಬಿ. ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ನಡೆದಿರುವುದು ನಿಜ. ಆದರೆ ಎಲ್ಲವನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪಮುಖ್ಯಮಂತ್ರಿ ಹುದ್ದೆ ನೀಡುವ ವಿಚಾರ ಪಕ್ಷದ ಹಿತದೃಷ್ಟಿಯಿಂದ ಚರ್ಚೆಯಾಗುತ್ತಿತ್ತು. ಆದರೆ ನಾವು ಯಾವುದೇ ಬೇಡಿಕೆ ಇಟ್ಟಿಲ್ಲ. ಪಕ್ಷವೇ ನಮ್ಮನ್ನು ಗುರುತಿಸಬೇಕು. ಈ ವಿಚಾರದಲ್ಲಿ ನಾವು ಯಾವುದೇ ರೀತಿಯ ಒತ್ತಡ ಹೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನೂತನ 19 ಸಚಿವರಿಗೆ ಇದೇ 13ರೊಳಗಾಗಿ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಇನ್ನು ಎರಡು ದಿನಗಳಲ್ಲಿ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ತಮ್ಮ ಸಚಿವ ಖಾತೆ ಬದಲಾವಣೆ ಮಾಡಲಾಗುತ್ತದೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಖಾತೆ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ತಾವು ಕೂಡ ಯಾವುದೇ ಖಾತೆಯನ್ನು ಕೇಳಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ. ಪಕ್ಷದ ನಾಯಕತ್ವ ಕೈಗೊಳ್ಳುವ ನಿರ್ಧಾರವನ್ನು ನಾವು ಗೌರವಿಸುತ್ತೇವೆ ಎಂದರು.

ಸದ್ಯ ತಾವು ನಿರ್ವಹಿಸುತ್ತಿರುವ ಲೋಕೋಪಯೋಗಿ ಇಲಾಖೆಯಲ್ಲಿಯೇ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ ಅವರು, ತಮಗೆ ನೀಡಿರುವ ಲೋಕೋಪಯೋಗಿ ಇಲಾಖೆಯ ಜವಾಬ್ದಾರಿಯನ್ನೇ ಮುಂದುವರಿಸಿಕೊಂಡು ಹೋಗುವುದಾಗಿ ಹೇಳಿದರು. ಉಳಿದ ಖಾತೆಯನ್ನು ಮಹಿಳೆಯರಿಗೆ ನೀಡುವ ವಿಚಾರ ಈಗಾಗಲೇ ಪೂರ್ಣಗೊಂಡಿದ್ದು, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷವೇ ತೀರ್ಮಾನಿಸಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular