HomeLatest Newsನಾಗೇಂದ್ರಗೆ ಸಚಿವ ಸ್ಥಾನ ಹೈಕಮಾಂಡ್ ತೀರ್ಮಾನ: ಡಿಸಿಎಂ ಹುದ್ದೆ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗಬಹುದು ಎಂದ ಸತೀಶ್...

ನಾಗೇಂದ್ರಗೆ ಸಚಿವ ಸ್ಥಾನ ಹೈಕಮಾಂಡ್ ತೀರ್ಮಾನ: ಡಿಸಿಎಂ ಹುದ್ದೆ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗಬಹುದು ಎಂದ ಸತೀಶ್ ಜಾರಕಿಹೊಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪದಲ್ಲಿ ಸಿಲುಕಿರುವ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪದಿಸಿದ್ದು, ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಈ ಬೆಳವಣಿಗೆ ನಡುವೆ ನಾಗೇಂದ್ರಗೆ ಸಚಿವ ಸ್ಥಾನ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಜಾಮೀನಿನ ಮೇಲೆ ಇರುವ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವ ಕುರಿತು ಇದು ಹೈಗಮಾಂಡ್ ತೀರ್ಮಾನ. ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಎಲ್ಲ ಹಿರಿಯರು ಚರ್ಚಿಸಿ ಇದನ್ನು ಮಾಡಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಪಕ್ಷದಲ್ಲಿ ಇದರ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಖಾತೆ ಹಂಚಿಕೆ ಮುಗಿದ ನಂತರ ಈ ಬಗ್ಗೆ ಚರ್ಚಿಸಲಾಗುವುದು. ಇದನ್ನು ಯಾವುದೇ ಸಮಯದಲ್ಲಿ ಮಾಡಬಹುದು ಎಂದು ತಿಳಿಸಿದರು.

ಮಹಿಳಾ ಮಂತ್ರಿಗಳ ಕೊರತೆಯ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಮಹಿಳೆಯರಿಗಾಗಿ ಒಂದು ಸ್ಥಾನ ಖಾಲಿ ಇದೆ. ಮಹಿಳಾ ಪ್ರಾತಿನಿಧ್ಯ ಇಲ್ಲದೆ ಮಂತ್ರಿಮಂಡಲ ಆಗುವುದಿಲ್ಲ. ಹೈಕಮಾಂಡ್ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಇನ್ನು ಸಚಿವ ಸ್ಥಾನ ಹರಾಜಾಗಿದೆ, ಹಣ ನೀಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದು ಕೇವಲ ಊಹಾಪೋಹ. ಯಾರಿಗೆ ಹಣ ನೀಡಿದ್ದಾರೆಂದು ಅವರು ಹೇಳಲಿ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular