HomeKarnatakaBIG NEWS: ಡಿಸಿಎಂ ಬಂದರೂ ಸ್ವಾಗತಿಸಲು ಬಾರದ ಸಚಿವರು,ಶಾಸಕರು; ಸತೀಶ್ ಜಾರಕಿಹೊಳಿ ಹೇಳಿದ್ದೇನು?

BIG NEWS: ಡಿಸಿಎಂ ಬಂದರೂ ಸ್ವಾಗತಿಸಲು ಬಾರದ ಸಚಿವರು,ಶಾಸಕರು; ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲೆಗೆ ಭೇಟಿ ಕೊಟ್ಟರೂ ಯಾವೊಬ್ಬ ಸಚಿವರು, ಶಾಸಕರು ಅವರನ್ನು ಸ್ವಾಗತಿಸಲೂ ಬಂದಿಲ್ಲ ಎಂಬ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.

ಇದೀಗ ಈ ವಿಚಾರವಾಗಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿ.ಕೆ.ಶಿವಕುಮಾರ್ ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಳಗಾವಿಗೆ ಬಂದಿದ್ದರು. ನಾನು ಬೆಳಗಾವಿಯಲ್ಲಿ ಇರಲಿಲ್ಲ. ಹಾಗಾಗಿ ಭೇಟಿ ಸಾಧ್ಯವಾಗಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಡಿ.ಕೆ.ಶಿವಕುಮಾರ್ ಅವರಿಗೆ ಒಂದು ದಿನ ಮುಂಚಿತವಾಗಿಯೇ ಹೇಳಿದ್ದೆ. ನಾನು ಅಂದು ಬೆಳಗಾವಿಯಲ್ಲಿ ಇರಲ್ಲ ಎಂದು. ಬಹಳ ಜನ ಪ್ರವಾಸಕ್ಕೆ ಹೋಗಿದ್ದರು. ಜಿಲ್ಲಾಧ್ಯಕ್ಷರು ಕೂಡ ಪ್ರವಾಸಕ್ಕೆ ಹೋಗಿದ್ದರು. ಹೀಗಾಗಿ ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular