HomeKarnatakaಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಬೆನ್ನಲ್ಲೇ ಶಾಸಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ...

ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಬೆನ್ನಲ್ಲೇ ಶಾಸಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಬಿಜೆಪಿಯವರು ರಾಜಕೀಯಕ್ಕಾಗಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಇಡಿ ದಾಳಿ ನಮಗೆ ಗೊತ್ತಿಲ್ಲದಿರುವುದೇನಲ್ಲ. ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಈ ಹಿಂದೆಯೂ ದಾಳಿ ಮಾಡಿದ್ದರು. ಸತೀಶ್ ಜಾರಕಿಹೊಳಿ ಹಿರಿಯ ಸಚಿವರಾಗಿದ್ದು, ರಾಜಕಾರಣದ ಜತೆಗೆ ವ್ಯವಹಾರ ಮತ್ತು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಅವರು ಕಾನೂನಿನ ಚೌಕಟ್ಟಿನಲ್ಲೇ ವ್ಯವಹಾರ ನಡೆಸುತ್ತಿದ್ದಾರೆ. ಇಡಿ ಕೇಳುವ ಪ್ರಶ್ನೆಗಳಿಗೆ ಸತೀಶ್ ಜಾರಕಿಹೊಳಿ ಸೂಕ್ತ ಉತ್ತರ ನೀಡಲಿದ್ದಾರೆ. ಹೀಗಾಗಿ ಯಾರೂ ಗಾಬರಿಯಾಗಬೇಕಿಲ್ಲ. ಸಂಬಂಧಿಕರ ವ್ಯವಹಾರಗಳ ಬಗ್ಗೆ ನಮಗೆ ಗೊತ್ತಿಲ್ಲ. ಆದರೆ ಸತೀಶ್ ಜಾರಕಿಹೊಳಿ ಪ್ರಾಮಾಣಿಕ ರಾಜಕಾರಣಿ, ಅವರು ಯಾವುದೇ ತಪ್ಪು ಮಾಡಿಲ್ಲ ಎಂಬ ವಿಶ್ವಾಸವಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರಕ್ಕೆ 100 ದಿನ ಪೂರ್ಣಗೊಳ್ಳಲಿದ್ದು, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಸಂದರ್ಭದಲ್ಲಿ ಇಂತಹ ದಾಳಿ ನಡೆಯುತ್ತಿರುವುದು ರಾಜಕೀಯ ಉದ್ದೇಶ ಹೊಂದಿದೆ. ನಮ್ಮ ಸರ್ಕಾರ ಮತ್ತು ಪಕ್ಷವನ್ನು ಎಲ್ಲ ಕಡೆಗಳಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. 100 ದಿನಗಳ ಸಂದರ್ಭದಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದರು.

ಸತೀಶ್ ಜಾರಕಿಹೊಳಿ ಅವರು ಪ್ರಬಲವಾಗಿ ಬೆಳೆಯುತ್ತಿರುವ ನಾಯಕನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ಅವರನ್ನು ರಾಜಕೀಯವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಸತೀಶ್ ಜಾರಕಿಹೊಳಿ ಅವರ ಬೆಳವಣಿಗೆಯನ್ನು ಸಹಿಸಿಕೊಳ್ಳಲು ಆಗದೆ ತೊಂದರೆ ಕೊಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಅವರಿಗೆ ತಿರುಗುಬಾಣವಾಗಲಿದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ನನ್ನ ಮೇಲೂ ದಾಳಿ ಮಾಡಿ ಬಂಧಿಸಿದ್ದರು. ಆದರೆ ಇಂದು ಏನಾಗಿದೆ? ನಾನು ರಾಜ್ಯದ ಸಿಎಂ ಆಗಿರುವೆ ಎಂದರು.

ಮೊದಲು ನಾಗೇಂದ್ರ ಅವರ ಮೇಲೆ ದಾಳಿ ಮಾಡಿದರು. ನಾನು ಈ ಪ್ರಕರಣ ಪರಿಶೀಲನೆ ಮಾಡಿದೆ. ಯಾವುದೇ ತಪ್ಪು ಮಾಡಿರಲಿಲ್ಲ. ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ. ತನಿಖೆ ಮಾಡಿಸಿದ್ದೇವೆ. ಬ್ಯಾಂಕ್ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎಂದು ಹೇಳಿದ್ದು ನಾವೆ. ಆ ಹಣವನ್ನು ವಾಪಸ್ ಪಡೆಯಲಾಗಿದೆ. ಇಡಿ, ಸಿಬಿಐ ಕೈಲಿ ಒಂದು ರೂ ವಾಪಸ್ ಪಡೆಯಲು ಆಗಿಲ್ಲ. ₹84 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದ್ದರು. ಬಳಿಕ ಸಿಐಡಿ ಹಾಗೂ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿ ₹79 ಕೋಟಿ ಹಣವನ್ನು ವಾಪಸ್ ಪಡೆದಿದ್ದಾರೆ. ಇನ್ನೂ ₹5 ಕೋಟಿ ಮಾತ್ರ ಬಾಕಿ ಉಳಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ ಬಳಿಕವೂ ಈ ವಿಚಾರವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದರು.

ಶಾಸಕರು, ಸಚಿವರಿಗೆ ಸಿಎಂ ಎಚ್ಚರಿಕೆ:

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ದಾಳಿ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾತ್ ಶಾಸಕರು, ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಮಾಹಿತಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಕಾಂಗ್ರೆಸ್ ನಾಯಕರು, ಸಚಿವರು ಮತ್ತು ಶಾಸಕರ ಮೇಲೂ ತನಿಖಾ ಸಂಸ್ಥೆಗಳ ಕ್ರಮ ನಡೆಯುವ ಸಾಧ್ಯತೆ ಇದೆ. ಪಕ್ಷದ ಎಲ್ಲ ಶಾಸಕರು ಮತ್ತು ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ತನಿಖೆಗೆ ನಾವು ಹೆದರುವುದಿಲ್ಲ. ಆದರೆ ಸುಳ್ಳು ಕಥೆ ಕಟ್ಟುವುದು, ಸುಳ್ಳು ಆರೋಪ ಮಾಡುವುದು ಹಾಗೂ ಜನರನ್ನು ದಾರಿ ತಪ್ಪಿಸುವ ಪ್ರಯತ್ನವನ್ನು ಖಂಡಿಸುತ್ತೇವೆ. ಬಿಜೆಪಿ ನಾಯಕರ ವಿರುದ್ಧ ಮಾತ್ರ ಯಾವುದೇ ದಾಳಿ ನಡೆಯುವುದಿಲ್ಲ. ಬೋವಿ ಹಗರಣದ ಬಗ್ಗೆ ಇಡಿ ಅವರು ಯಾಕೆ ಪ್ರವೇಶ ಮಾಡಲಿಲ್ಲ. ಬಿಡದಿ, ನೈಸ್ ಯೋಜನೆಗೆ ಸಹಿ ಹಾಕಿ ಆರಂಭಿಸಿದವರು ಅವರೇ ಆದರೆ ಆರೋಪ ಮಾಡುವುದು ನಮ್ಮ ವಿರುದ್ಧ. ಸತ್ಯ ಆಚೆ ಬರಲಿದೆ ಎಂದರು.

ನಾವು ನೂರಕ್ಕೆ ನೂರು ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲ ನೀಡುತ್ತೇವೆ. ಸಚಿವರ ಕುಟುಂಬದವರ ಮೇಲೆಯೂ ಇಡಿ ದಾಳಿ ನಡೆಸಿರುವುದು ದುರದೃಷ್ಟಕರ. ಇಡಿ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಅವರು ಸಮರ್ಥವಾಗಿ ಉತ್ತರ ನೀಡುತ್ತಾರೆ. ಅವರು ಒಬ್ಬ ಪ್ರಗತಿಪರ, ದೂರದೃಷ್ಠಿಯುಳ್ಳ ಪ್ರಾಮಾಣಿಕ ರಾಜಕಾರಣಿ, ಅವರು ಯಾವುದೇ ತಪ್ಪು ಮಾಡಿರುವುದಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular