ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಶಾಸಕ ಸತೀಶ್ ಸೈಲ್ ವಿಚಾರಣೆಗೆ ಸಹಕರಿಸುತ್ತಿಲ್ಲ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿಲ್ಲ ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.
ಸತೀಶ್ ಸೈಲ್ ಹಾಗೂ ಇತರರ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣದ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿದ್ದು, ವಿಚಾರಣೆ ವೇಳೆ ಸತೀಶ್ ಸೈಲ್ ಪರ ವಕೀಲರು, ಅರ್ಜಿದಾರರ ಪರ ಹಿರಿಯ ವಕೀಲರು ಮತ್ತು ಅರ್ಜಿದಾರರು ಧಾರವಾಡಕ್ಕೆ ತೆರಳಿರುವ ಕಾರಣದಿಂದ ವಿಚಾರಣೆಗೆ ಗೈರಾಗಿದ್ದಾರೆ. ಹಾಗಾಗಿ ವಿನಾಯಿತಿ ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಇದು 2014ರ ಪ್ರಕರಣ. ಈ ಹಿಂದೆ ಅರ್ಜಿದಾರರ ಗೈರು ಹಾಜರಿಗೆ ಕೋರ್ಟ್ ವಿನಾಯಿತಿ ನೀಡಿತ್ತು. ಆದಾಗ್ಯೂ ವಕೀಲರು ವಿಚಾರಣೆ ಮುಂದೂಡಿಕೆ ಮನವಿ ಮಾಅಡಿದ್ದಾರೆ. ಬೇರೊಂದು ನ್ಯಾಯಾಲಯದಲ್ಲಿ ಕಾರ್ಯನಿರತನಾಗಿದ್ದೇನೆ ಎಂಬ ಕಾರಣಕ್ಕೆ ವಕೀಲರ ಹಾಜರಾತಿಗೆ ವಿನಾಯಿತಿ ನೀಡಿ ವಿಚಾಅರಣೆಯನ್ನು ಮುಂದೂಡುವುದು ಸರಿಯಲ್ಲ. ಕಾನೂನಿನ ಅಡಿಯಲ್ಲಿ ಇಂತಹ ಅರ್ಜಿ ತಿರಸ್ಕರಿಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದರು.
ಎಲ್ಲಾ ಆರೋಪಿಗಳ ವಿಚಾರಣೆ ನಡೆಸಿತ್ತಿರುವಾಗ ಮೊದಲ ಆರೋಪಿಯಾಗಿರುವ ಇವರೊಬ್ಬರ ಗೈರನ್ನು ಮನ್ನಿಸಲಾಗದು. ಸತೀಶ್ ಸೈಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಲಬೇಕಾಗುತ್ತದೆ ಎಂದು ಬಂಧನ ವಾರಂಟ್ ಹೊರಡಿಸಿದ್ದಾರೆ.
ಇದೇ ವೇಳೆ ಇಡಿ ದಾಖಲಿಸಿರುವ ಮತ್ತೊಂದು ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿದ್ದ ಸತೀಶ್ ಸೈಲ್ ಅವರ ಅರ್ಜಿಯನ್ನೂ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
