ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಉತ್ತರ ಕನ್ನಡ ಜಿಲ್ಲೆಯ ಅಕಾರವಾರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ ಶಾಸಕರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.
ಶಾಸಕ ಸತೀಶ್ ಸೈಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿ ತೆರಳಿದ್ದಾರೆ. ಇಡಿ ದಾಳಿ ಬಳಿಕ ಸತೀಶ್ ಸೈಲ್ ತಮ್ಮ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದು, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ.
ಸತೀಶ್ ಸೈಲ್ ಮನೆಯಲ್ಲಿ ಅವರ ಅತ್ತೆಯ ಉಪಸ್ಥಿತಿಯಲ್ಲಿಯೇ ಶೋಧಕಾರ್ಯ ನಡೆಸಲಾಗಿದೆ. 22 ಗಂಟೆಗಳ ಕಾಲ ನಿರಂತರವಾಗಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದು ತೆರಳಿದ್ದಾರೆ ಎನ್ನಲಾಗಿದೆ.