ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ನಡೆದ ಇಡಿ ದಾಳಿಯಲ್ಲಿ ಕೋಟಿ ಕೋಟಿ ಹಣ ಹಾಗೂ 6 ಕೆಜಿ ಚಿನ್ನದ ಬಿಸ್ಕೆಟ್ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
1.68 ಕೋಟಿ ನಗದು ಹಣ, 6.75 ಕೆಜಿ ಚಿನ್ನದ ಬಿಸ್ಕೆಟ್ ಗಳು ಹಾಗೂ 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಅದಿರು ಪ್ರಕರಣದಲ್ಲಿ ಜೈಲು ಸೇರಿದ್ದ ಸತೀಶ್ ಸೈಲ್, ಜಾಮೀನು ಮೇಲೆ ಬಿಡುಗಡೆಯಾಗಿದ್ದು, ಇದೇ ಪ್ರಕರಣದಲ್ಲಿ ಸತೀಸ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.