HomeLatest NewsBIG NEWS: ಇಡಿ ದಾಳಿ ಬೆನ್ನಲ್ಲೇ ಯಾರ ಸಂಪರ್ಕಕ್ಕೂ ಸಿಗದೇ ಅಜ್ಞಾತ ಸ್ಥಳಕ್ಕೆ ತೆರಳಿದ ಶಾಸಕ...

BIG NEWS: ಇಡಿ ದಾಳಿ ಬೆನ್ನಲ್ಲೇ ಯಾರ ಸಂಪರ್ಕಕ್ಕೂ ಸಿಗದೇ ಅಜ್ಞಾತ ಸ್ಥಳಕ್ಕೆ ತೆರಳಿದ ಶಾಸಕ ಸತೀಶ್ ಸೈಲ್

ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಉತ್ತರ ಕನ್ನಡ ಜಿಲ್ಲೆಯ ಅಕಾರವಾರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ ಶಾಸಕರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.

ಶಾಸಕ ಸತೀಶ್ ಸೈಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿ ತೆರಳಿದ್ದಾರೆ. ಇಡಿ ದಾಳಿ ಬಳಿಕ ಸತೀಶ್ ಸೈಲ್ ತಮ್ಮ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದು, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸತೀಶ್ ಸೈಲ್ ಮನೆಯಲ್ಲಿ ಅವರ ಅತ್ತೆಯ ಉಪಸ್ಥಿತಿಯಲ್ಲಿಯೇ ಶೋಧಕಾರ್ಯ ನಡೆಸಲಾಗಿದೆ. 22 ಗಂಟೆಗಳ ಕಾಲ ನಿರಂತರವಾಗಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದು ತೆರಳಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular