ಬೆಂಗಳೂರು: ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ನಿನ್ನೆ ಬಂಧಿಸಿದ್ದರು. ಇಂದು ಅವರನ್ನು ಇಡಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, ಶಾಸಕರನ್ನು ಸೆಪ್ಟೆಂಬರ್ 12ರವರೆಗೆ ಎರಡು ದಿನಗಳ ಕಾಲ ಇಡಿ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.