ಸಾವರ್ಕರ್ ಬಗ್ಗೆ ಸಚಿವ ಮಧು ಉದ್ಧಟನತದ ಮಾತು: ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ವಿಧಾನಸಭೆಯಲ್ಲಿ ಸಾವರ್ಕರ್ ವಿಚಾರವಾಗಿ ಬಿಜೆಪಿ -ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ ನಡೆದಿದೆ.

ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯ ವೇಳೆ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಶಿವಮೊಗ್ಗ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ರಾಜ್ಯಪಾಲರ ಭಾಷಣದಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಯಿಸಿದ್ದೇವೆ ಎಂದು ಹೇಳಿದ್ದಾರೆ. ಪಠ್ಯದಿಂದ ಸಾವರ್ಕರ್ ವಿಚಾರವನ್ನು ಕಿತ್ತು ಬಿಸಾಕಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಧಟತನದಿಂದ ಮಾತನಾಡಿದ್ದಾರೆ. ಈ ಮೂಲಕ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಸದಸ್ಯ ಚನ್ನಬಸಪ್ಪ ಹೇಳಿದ್ದು, ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಧ್ಯಪ್ರವೇಶ ಮಾಡಿದ ಸ್ಪೀಕರ್ ಯು.ಟಿ. ಖಾದರ್ ಅವರು, ಕಾಂಗ್ರೆಸ್ ಸದಸ್ಯರನ್ನು ಬಿಟ್ಟು ನನ್ನನ್ನು ನೋಡಿ ಮಾತನಾಡಿ ಎಂದು ನೂತನ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read