ʼಈರುಳ್ಳಿʼಯಿಂದ ಕೂದಲಿನ ಸಮಸ್ಯೆಗೆ ಹೇಳಿ ಗುಡ್ ಬೈ

ಕೂದಲು ಉದುರುವುದು ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಒತ್ತಡದ ಜೀವನ, ಫಾಸ್ಟ್‌ ಫುಡ್‌ ಗಳ ಮೊರೆ ಹೋಗಿ ಪೋಷಕಾಂಶಗಳ ಆಹಾರ ಸೇವಿಸದೇ ಇರುವುದು, ನಿದ್ದೆ ಇಲ್ಲದಿರುವುದು, ನೀರಿನ ಸಮಸ್ಯೆ ಹೀಗೆ ಅನೇಕ ಕಾರಣಗಳಿಂದ ಕೂದಲು ಉದುರುತ್ತದೆ.

ಕೆಲವೊಂದು ಸರಳ ಮನೆ ಮದ್ದಿನ ಪ್ರಯೋಗ ಮಾಡಿ ತಲೆ ಹೊಟ್ಟು, ಕೂದಲು ಉದುರುವುದನ್ನು ತಡೆಗಟ್ಟಬಹುದು. ಈರುಳ್ಳಿ ಈ ಎಲ್ಲಾ ಸಮಸ್ಯೆ ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

* ಈರುಳ್ಳಿಯ ರಸ ತೆಗೆದು ತಲೆಗೆ ಹಚ್ಚಿ ಅರ್ಧ ಗಂಟೆಯ ನಂತರ ಸ್ನಾನ ಮಾಡಿದರೆ ತಲೆ ಹೊಟ್ಟು ನಿಧಾನವಾಗಿ ನಿವಾರಣೆಯಾಗುತ್ತದೆ. ವಾರದಲ್ಲಿ ಎರಡು ಬಾರಿ ಹೀಗೆ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

* ತಲೆಗೆ ಶ್ಯಾಂಪೂ ಬಳಸಿ ಸ್ನಾನ ಮಾಡಿದ ಬಳಿಕ ಕೊನೆಯಲ್ಲಿ ಬಿಸಿ ನೀರಿಗೆ ಈರುಳ್ಳಿ ರಸ ಹಾಕಿ ತೊಳೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಈ ರೀತಿ ಮಾಡುತ್ತಾ ಬಂದರೆ ಕೂದಲ ಎಲ್ಲಾ ಸಮಸ್ಯೆಗಳು ಬಹುಬೇಗ ಕಡಿಮೆಯಾಗುತ್ತದೆ.

* ಕೊಬ್ಬರಿ ಎಣ್ಣೆಯ ಜೊತೆಗೆ ಒಂದು ಚಮಚ ಈರುಳ್ಳಿ ರಸ, ಒಂದು ಚಮಚ ಬಾದಾಮಿ ಎಣ್ಣೆ ಮಿಶ್ರಣ ಮಾಡಿಕೊಂಡು ತಲೆಗೆ ಮಸಾಜ್‌ ಮಾಡುವುದರಿಂದ ಕೂದಲಿಗೆ ಕಾಂತಿ ಬರುವುದರ ಜೊತೆಗೆ ಹೊಟ್ಟು ಕೂಡ ನಿವಾರಣೆಯಾಗುತ್ತದೆ.

* ಈರುಳ್ಳಿಗೆ ಜೇನುತುಪ್ಪ ಸೇರಿಸಿಕೊಂಡು ದಿನನಿತ್ಯ ಸೇವಿಸುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.

* ಈರುಳ್ಳಿಯನ್ನು ಸಣ್ಣದಾಗಿ ಹೆಚ್ಚಿ ಅದಕ್ಕೆ ಒಂದು ಚಮಚ ಆಲೀವ್‌ ಎಣ್ಣೆ ಸೇರಿಸಿ ತಲೆಗೆ ಹಚ್ಚಿ ಎರಡು ಗಂಟೆಯ ನಂತರ ಸ್ನಾನ ಮಾಡಿದರೆ ಕೂದಲು ಆರೋಗ್ಯವಾಗಿರುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read