HomeKarnatakaBIG NEWS: ಎಟಿಎಂನಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂಪಾಯಿ ಹಣ ಬೆಂಕಿಗಾಹುತಿ

BIG NEWS: ಎಟಿಎಂನಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂಪಾಯಿ ಹಣ ಬೆಂಕಿಗಾಹುತಿ

ಹೊಸಕೋಟೆ: ಎಸ್ ಬಿಐ ಎಟಿಎಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಟಿಎಂ ಇರುವ ಕಟ್ಟಡ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.

ಹೊಸಕೋಟೆಯ ಕಾಲೇಜ್ ರಸ್ತೆಯ ಫರ್ವಾಜ್ ಪ್ಲಾಜಾದ ಬಳಿ ಇರುವ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಎಟಿಎಂ ನಲ್ಲಿ 16 ಲಕ್ಷ ಹಣ ಇತ್ತು ಎಂದು ಹೇಳಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸ್ತೆಬಳಿಯೇ ಇದ್ದಕ್ಕಿದ್ದಂತೆ ಎಟಿಎಂ ಹೊತ್ತಿ ಉರಿದ ಪರಿಣಾಮ ಸಾವಿರಾರು ಜನರು ಸೇರಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular