BIG BREAKING: ಸುಪ್ರೀಂ ಕೋರ್ಟ್ ಛೀಮಾರಿ ಬಳಿಕ ಚುನಾವಣಾ ಬಾಂಡ್ ವಿವರ ಸಲ್ಲಿಸಿದ SBI: ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಶುಕ್ರವಾರ ಪ್ರಕಟ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳ ವಿವರವನ್ನು ಸಲ್ಲಿಸಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಎಸ್‌ಬಿಐ ಮುಚ್ಚಿದ ಲಕೋಟೆಯಲ್ಲಿ ಚುನಾವಣಾ ಬಾಂಡ್ ಗಳ ವಿವರವನ್ನು ಸಲ್ಲಿಕೆ ಮಾಡಿದೆ. ಶುಕ್ರವಾರ ವೆಬ್ಸೈಟ್ ನಲ್ಲಿ ಕೇಂದ್ರ ಚುನಾವಣಾ ಆಯೋಗ ವಿವರಗಳನ್ನು ಪ್ರಕಟಿಸುತ್ತದೆ. ಸುಪ್ರೀಂಕೋರ್ಟ್ ಆದೇಶದಂತೆ ವೆಬ್ಸೈಟ್ ನಲ್ಲಿ ವಿವರಗಳನ್ನು ಪ್ರಕಟಿಸಲಾಗುವುದು.

ಸುಪ್ರೀಂ ಕೋರ್ಟ್‌ನ ಇತ್ತೀಚಿನ ಟೀಕೆಗಳಿಗೆ ಪ್ರತಿಕ್ರಿಯೆಯಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ಡೇಟಾವನ್ನು ಚುನಾವಣಾ ಆಯೋಗಕ್ಕೆ ತ್ವರಿತವಾಗಿ ವರ್ಗಾಯಿಸಿದೆ. ಈ ಮಾಹಿತಿಯನ್ನು ಒದಗಿಸಲು ವಿಫಲವಾದ ಬ್ಯಾಂಕ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read