HomeKarnatakaಎಸ್‍ಸಿ, ಎಸ್‍ಟಿ ಮೀಸಲಾತಿ: 9ನೇ ಶೆಡ್ಯುಲ್‍ಗೆ ಸೇರಿಸಿ

ಎಸ್‍ಸಿ, ಎಸ್‍ಟಿ ಮೀಸಲಾತಿ: 9ನೇ ಶೆಡ್ಯುಲ್‍ಗೆ ಸೇರಿಸಿ

ಕೇಂದ್ರ ಸರ್ಕಾರ ರಾಜಕಾರಣ ಮಾಡದೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್‌ಗೆ ಸೇರಿಸಿ ನ್ಯಾಯ ಒದಗಿಸುವುದನ್ನು ಬಿಟ್ಟು ರಾಜಕಾರಣ ಮಾಡಲು ಹೊರಟಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಮಂಡಲದ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿನ್ನು 2023ರಲ್ಲಿ ಪರಿಶಿಷ್ಟ ಜಾತಿ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ 3 ರಿಂದ 7ಕ್ಕೆ ಮೀಸಲಾತಿ ರಾಜ್ಯದಲ್ಲಿ ಜಾರಿಯಲ್ಲಿತ್ತು. ಈಚೆಗೆ ಹೈಕೋರ್ಟ್‍ನಲ್ಲಿ ದಾವೆ ಹೂಡಿರುವುದರಿಂದ ಮೀಸಲಾತಿ ಹೆಚ್ಚಳಕ್ಕೆ ತಡೆಯಾಗಿ ಸದ್ಯ ಹಳೆ ಮೀಸಲಾತಿ ಜಾರಿಯಲ್ಲಿದೆ.

ಕಳೆದ ಸರ್ಕಾರದಲ್ಲಿ ಒಮ್ಮೆ ಮತ್ತು ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಲು ಪ್ರಸ್ತಾವನೆ ಕಳಿಸಿದರೂ ಸಹ ಕೇಂದ್ರ ಸರ್ಕಾರ ಮಾತ್ರ ಸೇರಿಸಲು ಮನಸ್ಸು ಮಾಡುತ್ತಿಲ್ಲ ಎಂದು ದೂರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ಪ್ರಸ್ತುತ 50,432 ಉದ್ಯೋಗ ಭರ್ತಿ ಮಾಡುತ್ತಿದೆ. ಈ ಸಂದರ್ಭದಲ್ಲಿ ಮೀಸಲಾತಿ ಶೇ.24 ರಂತೆ ಭರ್ತಿ ಮಾಡಿದರೆ 14,543 ಹುದ್ದೆಗಳು ದೊರೆಯುತ್ತವೆ. ಮೀಸಲಾತಿ ಶೇ.18 ರಂತೆ ಭರ್ತಿ ಮಾಡಿದರೆ 11,156 ಮಾತ್ರ ದೊರೆಯುವ ಜೊತೆಗೆ 3087 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಉದ್ಯೋಗದಿಂದ ವಂಚಿತರಾಗುತ್ತಾರೆ ಎಂದರು.

ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡಲಿ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರ ಬದುಕಲ್ಲಿ ಆಟವಾಡುವುದು ಬಿಟ್ಟು 2023 ರಿಂದ ಪ್ರಸ್ತಾವನೆಯನ್ನು ಹಾಗೆಯೇ ಇಟ್ಟುಕೊಂಡಿರುವ ಕೇಂದ್ರ ಸರ್ಕಾರ ಕೂಡಲೇ ಸಂವಿಧಾನದ 9 ಶೆಡ್ಯೂಲ್ ಗೆ ಸೇರಿಸುವ ಕೆಲಸ ಮಾಡಿ ನ್ಯಾಯ ಒದಗಿಸುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಸಂದರ್ಭದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಸೇರಿ ಹಲವು ಮಂತ್ರಿಗಳು ಈಗ ಸಂಸದರಾಗಿದ್ದು, ಪರಿಶಿಷ್ಟರ ಬದುಕಿನಲ್ಲಿ ರಾಜಕಾರಣ ಮಾಡದೇ ಕೇಂದ್ರ ಸರ್ಕಾರಕ್ಕೆ 9 ಶೆಡ್ಯೂಲ್‍ಗೆ ಸೇರಿಸಲು ಶ್ರಮಿಸಬೇಕು. ಸದ್ಯ ಮೀಸಲಾತಿ ಸಮಸ್ಯೆಯಿಂದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಯ ಯುವಕರಿಗೆ ಮೆಡಿಕಲ್, ಇಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್ ಮತ್ತು ಉದ್ಯೋಗದಿಂದ ವಂಚಿತರಾಗುತ್ತಿದ್ದು ಕೂಡಲೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಲು ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಬಜೆಟ್ ಮೇಲಿನ ಚರ್ಚೆ; ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್, ಗಾಂಧೀಜಿಯ ಕನಸು, ಸ್ವಾವಲಂಬನೆ, ಬುದ್ದನ ಕರುಣೆ, ಅಂಬೇಡ್ಕರ್ ಸಾಮಾಜಿಕ ನ್ಯಾಯ, ಬಸವಣ್ಣನವರು ಕಾಯಕ ನಿಷ್ಠೆ ಸೇರಿ ಎಲ್ಲಾ ಇಲಾಖೆಗಳಿಗೂ ನಮ್ಮ ಬಜೆಟ್‍ನಲ್ಲಿ ನ್ಯಾಯ ಒದಗಿಸಲಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯಿಂದ ನಾಲ್ಕು ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರ 22 ಸಾವಿರ ಕೋಟಿಯಿಂದ 16 ಸಾವಿರ ಕೋಟಿಗೆ ಇಳಿಸಿ 5300 ಕೋಟಿ ನೀಡುತ್ತೇವೆ ಎಂದು ತಿಳಿಸಿದ್ದರು. ಇದನ್ನು ಪ್ರಸ್ತುತ ಕೇಂದ್ರದ ತಾಂತ್ರಿಕ ಸಲಹಾ ಸಮಿತಿ ಭದ್ರಾ ಯೋಜನೆಯ ಮೊತ್ತವನ್ನು ಪುನರ್ ಪರಿಶೀಲಿಸಿ ಭದ್ರಕ್ಕೆ 6 ಸಾವಿರ ಕೋಟಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯ ಬಜೆಟ್‍ನಲ್ಲಿ ಘೋಷಣೆ ಮಾಡಿರುವ ಚಿತ್ರದುರ್ಗ ಶಾಖಾ ಕಾಲುವೆ, 157 ಕೆರೆ ತುಂಬಿಸುವುದು, ಫೀಡರ್ ಚಾನಲ್ ಮುಗಿಸುತ್ತೇವೆ ಮತ್ತು 2027-2028ಕ್ಕೆ ಕಾಮಗಾರಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಅನುದಾನ ಒದಗಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಚಿತ್ರದುರ್ಗ ಐತಿಹಾಸಿಕ ನಗರವಾಗಿದ್ದು, ಕೇಂದ್ರದ ಗೃಹ ಸಚಿವರು 2018ರ ಚುನಾವಣೆಯಲ್ಲಿ ದುರ್ಗದಲ್ಲಿ ಮದಕರಿನಾಯಕರ ಕುರಿತ ಥೀಮ್ ಪಾರ್ಕ್ ಮಾಡುತ್ತೇವೆ ಎಂದು ಮಾತು ಕೊಟ್ಟು ಇಲ್ಲಿಯವರೆಗೂ ಯಾವ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಮದಕರಿನಾಯಕ ಥೀಮ್ ಪಾರ್ಕ್ ಮಾಡಲು ಅಗತ್ಯ ಸಹಕಾರ ರಾಜ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular