HomeKarnatakaಪರಿಶಿಷ್ಟ ಕಾರ್ಯಕರ್ತೆ ನೇಮಕ: ಅಂಗನವಾಡಿಗೆ ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು

ಪರಿಶಿಷ್ಟ ಕಾರ್ಯಕರ್ತೆ ನೇಮಕ: ಅಂಗನವಾಡಿಗೆ ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ(ಡಬ್ಲ್ಯೂ) ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಪರಿಶಿಷ್ಟ ಸಮುದಾಯದ ಕಾರ್ಯಕರ್ತೆ ನೇಮಕವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಭಾಲ್ಕಿ ತಾಲೂಕು ಕೇಂದ್ರದಿಂದ ಸುಮಾರು 13 ಕಿಲೋ ಮೀಟರ್ ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಳೆದ ವರ್ಷ ಅಂಬಿಕಾ ಅವರು ಕಾರ್ಯಕರ್ತೆಯಾಗಿ ನೇಮಕವಾಗಿದ್ದಾರೆ. ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ಇಲ್ಲ. ಸಹಾಯಕಿ ಕೂಡ ಇಲ್ಲದ ಕಾರಣ ಅಂಬಿಕಾ ಅವರೇ ಅಡುಗೆ ತಯಾರಿಸುತ್ತಾರೆ. ಗ್ರಾಮದ ಮಕ್ಕಳ ಮನೆಗೆ ತೆರಳಿ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವಂತೆ ಮನವಿ ಮಾಡಿದ್ದರೂ ಪೋಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಹಲವು ಬಾರಿ ಮನವಿ ಮಾಡಿದ್ದರೂ ಮಕ್ಕಳನ್ನು ಕಳುಹಿಸಿಲ್ಲ. ದಾಖಲಾತಿಯಲ್ಲಿ 36 ಮಕ್ಕಳಿದ್ದು ಕೇವಲ ಐದಾರು ಮಕ್ಕಳಷ್ಟೇ ಅಂಗನವಾಡಿಗೆ ಬರುತ್ತಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular