HomeKarnatakaBREAKING: ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

BREAKING: ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಶ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಹಂಚಿಕೆಗೆ ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಥಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಳಮೀಸಲಾತಿಯನ್ನು ಯಾರಿಗೆ ಎಷ್ಟು ಹಂಚಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಗ್ಗಂಟಾಗಿದ್ದ ಒಳಮೀಸಲಾತಿಗೆ ಮೂರು ಸೂತ್ರವನ್ನು ಫೈನಲ್ ಮಾಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ಸಮಾನವಾಗಿ ಹಂಚಿಕೆಗೆ ತೀರ್ಮಾನಿಸಲಾಗಿದೆ. ಎಸ್ ಸಿ ಎಡಗೈ 5.25, ಬಲಗೈ 5.25, ಎಸ್ ಸಿ ಇತರರಿಗೆ ಶೇ.4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಳಗ ಪೈಕಿ ಅವಕಾಶ ವಂಚಿತ ಉಪಜಾತಿಗಳಿಗೆ ಒಳಮೀಸಲು ಕಲ್ಪಿಸಬೇಕೆಂದು ದಶಕಗಳ ಕಾಲದಿಂದಲೂ ಹಕ್ಕೋತ್ತಾಯ ಹಾಗೂ ಹೋರಾಟಗಳು ನಡೆದಿದ್ದವು. ಇದೀಗ ಈ ಸಂಬಂಧ ರಾಜ್ಯ ಸರ್ಕಾರ ಮೀಸಲಾತಿ ಹಂಚಿಕೆ ಮಾಡಿದೆ. ಎಡಗೈ 5.25, ಬಲಗೈ 5.25, ಎಸ್ ಸಿ ಇತರರಿಗೆ ಶೇ.4.5ರಷ್ಟು ಹಂಚಿಕೆ ಮಾಡಿ ಒಳಮೀಸಲಾತಿ ಜಾರಿಗೆ ತೀರ್ಮಾನ ಕೈಗೊಂಡಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular