BIG NEWS: ಪೋಷಕರ ಒತ್ತಡ ಮಕ್ಕಳ ಆತ್ಮಹತ್ಯೆಗೆ ಕಾರಣ: ಸುಪ್ರೀಂ ಕೋರ್ಟ್ ಅಭಿಪ್ರಾಯ: ಸ್ಪರ್ಧಾತ್ಮಕ ಪರೀಕ್ಷೆಗೆ ಮಕ್ಕಳ ಮೇಲಿನ ಒತ್ತಡಕ್ಕೆ ಕಳವಳ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಪರೀಕ್ಷೆಗಾಗಿ ಮಕ್ಕಳ ಮೇಲಿನ ಒತ್ತಡಕ್ಕೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಮಕ್ಕಳ ಆತ್ಮಹತ್ಯೆಗೆ ಪೋಷಕರ ಒತ್ತಡವೇ ಕಾರಣ ಎಂದು ಅಭಿಪ್ರಾಯಪಟ್ಟಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ಬಿಡಬೇಕು ಎಂದು ವಿಚಾರಣೆ ವೇಳೆ ಪೋಷಕರಿಗೆ ಸುಪ್ರೀಂಕೋರ್ಟ್ ಕಿವಿ ಮಾತು ಹೇಳಿದೆ.

ಕೋಚಿಂಗ್ ಸೆಂಟರ್ ಗಳ ಮೇಲೆ ನ್ಯಾಯಾಂಗ ನಿರ್ಬಂಧ ಹೇರಲಾಗದು. ಸಂಬಂಧಪಟ್ಟ ಸರ್ಕಾರಗಳೇ ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಬೇಕಿದ್ದರೆ ಅರ್ಜಿದಾರರು ಸರ್ಕಾರದ ಗಮನಕ್ಕೆ ತರಬಹುದಾಗಿದೆ. ಕೋಚಿಂಗ್ ಸೆಂಟರ್ ಗಳ ಮೇಲೆ ಕಡಿವಾಣ ಹಾಕುವ ಕೆಲಸ ನಮ್ಮದಲ್ಲ. ಸರ್ಕಾರಗಳೇ ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕು ತಿಳಿಸಿದೆ.

ಮುಂಬೈ ಮೂಲದ ಅನಿರುದ್ಧ ನಾರಾಯಣ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ದೇಶಾದ್ಯಂತ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಪೋಷಕರ “ತೀವ್ರ ಸ್ಪರ್ಧೆ” ಮತ್ತು “ಒತ್ತಡ” ಪ್ರಮುಖ ಕಾರಣ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಾಯಿಕೊಡೆಗಳಂತೆ ಬೆಳೆಯುತ್ತಿರುವ ಕೋಚಿಂಗ್ ಸಂಸ್ಥೆಗಳ ನಿಯಂತ್ರಣಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ, ಅಸಹಾಯಕತೆ ವ್ಯಕ್ತಪಡಿಸಿ, ಇಂತಹ ಸನ್ನಿವೇಶದಲ್ಲಿ ನ್ಯಾಯಾಂಗವು ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಇವು ಸುಲಭದ ಸಂಗತಿಗಳಲ್ಲ. ಈ ಎಲ್ಲಾ ಘಟನೆಗಳ ಹಿಂದೆ ಪೋಷಕರ ಒತ್ತಡವಿದೆ. ಮಕ್ಕಳಿಗಿಂತ ಹೆಚ್ಚಾಗಿ ಪೋಷಕರೇ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಅಂತಹ ಸನ್ನಿವೇಶದಲ್ಲಿ ನ್ಯಾಯಾಲಯವು ಹೇಗೆ ನಿರ್ದೇಶನಗಳನ್ನು ನೀಡುತ್ತದೆ ಎಂದು ಪೀಠವು ಅರ್ಜಿದಾರ ಮುಂಬೈ ಮೂಲದ ವೈದ್ಯ ಅನಿರುದ್ಧ ನಾರಾಯಣ್ ಮಲ್ಪಾನಿ ಪರ ಹಾಜರಿದ್ದ ವಕೀಲರಾದ ಮೋಹಿನಿ ಪ್ರಿಯಾಗೆ ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read